ಆರೋಗ್ಯಪೂರ್ಣ ಸಮಾಜಕ್ಕೆ ಜನಜಾಗೃತಿ ಅವಶ್ಯ- ಎಸ್.ಬಿ. ರಾಜೂರ

 ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಲು, ಜನರಲ್ಲಿ ಸ್ಚಚ್ಛತೆ, ನೈರ್ಮಲ್ಯ, ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ  ಎಂದು ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಪ್ರಾಚಾರ್ಯ ಎಸ್.ಬಿ. ರಾಜೂರ ಅವರು ಹೇಳಿದರು.
  ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯು ಕರ್ನಾಟಕ ರಾಜ್ಯ ಮದ್ಯಪಾನ ಮಂಡಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ  ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಜನಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
  ಸಾಮಾಜಿಕ ವ್ಯವಸ್ಥೆಯಲ್ಲಿ ಸ್ವಚ್ಛತೆ, ಉತ್ತಮ ಪರಿಸರಕ್ಕೆ ಸಾರ್ವಜನಿಕರು ಹೆಚ್ಚಿನ ಆದ್ಯತೆ ನೀಡಬೇಕು.  ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕು ಎಂದರೆ ನಮ್ಮ ಸುತ್ತಮುತ್ತಲ ಪರಿಸರವನ್ನು ನಾವು ಸ್ವಚ್ಛವಾಗಿಟ್ಟುಕೊಳ್ಳಬೇಕು.  ಜನರು ಈ ನಿಟ್ಟಿನಲ್ಲಿ ಜಾಗೃತರಾಗಬೇಕು.  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆರೋಗ್ಯ ಇಲಾಖೆಯ ಜೊತೆಗೂಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ

ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡುತ್ತಿದೆ.  ಈ ಜಾಗೃತಿ ಕಾರ್ಯಕ್ರಮಗಳು ಸಮುದಾಯದ ಪಾಲ್ಗೊಳ್ಳುವಿಕೆಯಿಂದ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

  ಜಿಲ್ಲಾ ವಾರ್ತಾಧಿಕಾರಿ ತುಕಾರಾಂ ರಾವ್ ಬಿ.ವಿ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಆವರಣದಿಂದ ಪ್ರಾರಂಭಗೊಂಡು, ಜವಾಹರ ರಸ್ತೆ, ಆಜಾದ್ ಸರ್ಕಲ್, ಹಸನ್ ರಸ್ತೆ, ಹೊಸಪೇಟೆ ರಸ್ತೆ ಮೂಲಕ  ತೆರಳಿದ ಜನಜಾಗೃತಿ ಜಾಥಾದಲ್ಲಿ ಕಾಲೇಜಿನ ಸುಮಾರು 400 ಕ್ಕೂ ಹೆಚ್ಚು ವಿದ್ಯಾರ್ಥಿ  ಭಾಗವಹಿಸಿದ್ದರು.  
Please follow and like us:
error