ಡಿ. ೨೭ ರಿಂದ ಕೊಪ್ಪಳ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಕೊಪ್ಪಳ ಡಿ.  ): ಕೊಪ್ಪಳ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಡಿ. ೨೭ ರಿಂದ ೨೯ ರವರೆಗೆ ಮೂರು ದಿನಗಳ ಕಾಲ ಕೊಪ್ಪಳದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.
  ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ ಡಿ. ೨೭ ರಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.  ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮಹ್ಮದ್ ವಜೀರ್ ಅಹ್ಮದ್ ಅವರು ಸಮಾರಂಭದ ಉದ್ಘಾಟನೆ ನೆರವೇರಿಸುವರು.  ಅಂದು ಸಾಮೂಹಿಕ ಗೌರವ ರಕ್ಷೆ, ಪಥ ಸಂಚಲನ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ.  ಕ್ರೀಡಾಕೂಟದ ಸಮಾರೋಪ ಸಮಾರಂಭ ಡಿ. ೨೯ ರಂದು ಸಂಜೆ ೪ ಗಂಟೆಗೆ ನಡೆಯಲಿದ್ದು, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು, ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅಂದು ಬಹುಮಾನ ವಿತರಣೆ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್ ಅವರು ತಿಳಿಸಿದ್ದಾರೆ.
Please follow and like us:
error