ಶ್ರೇಷ್ಠ ಕೃಷಿಕ ಪ್ರಶಸ್ತಿ : ಅರ್ಜಿ ಆಹ್ವಾನ

  ಹೈದರಾಬಾದ್-ಕರ್ನಾಟಕ ಭಾಗದ ರೈತರ ಒಡನಾಡಿ ಎನಿಸಿಕೊಂಡಿರುವ ರಾಯಚೂರು ಕೃಷಿ ವಿಶ್ವವಿದ್ಯಾಲಯವು ನ. ೧೪ ರಿಂದ ೧೬ ರವರೆಗೆ ಕೃಷಿ ಮೇಳ-೨೦೧೪ ವನ್ನು ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ಆಯೋಜಿಸಿದ್ದು,  ಜಿಲ್ಲಾ ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಕೃಷಿ ಮಹಿಳೆಯರಿಗೆ ಪ್ರಶಸ್ತಿಯನ್ನು ನೀಡಿ ಸನ್ಮಾನಿಸುವ ಸಲುವಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
  ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಅತ್ಯತ್ತಮ ಸಾಧನೆಗೈದ ಕೊಪ್ಪಳ ಜಿಲ್ಲೆಯ ಕೃಷಿಕ ಹಾಗೂ ಕೃಷಿ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ರೈತ, ರೈತ ಮಹಿಳೆಯರು ನಿಗದಿತ ಅರ್ಜಿ ನಮೂನೆ-೧ ಅನ್ನು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳ ಅಥವಾ ಕೃಷಿ ವಿಜ್ಞಾನ ಕೇಂದ್ರ, ಗಂಗಾವತಿ ಇಲ್ಲಿಂದ ಪಡೆದು ಅ. ೨೭ ರೊಳಗೆ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳ ಅಥವಾ ಕೃಷಿ ವಿಜ್ಞಾನ ಕೇಂದ್ರ, ಗಂಗಾವತಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ,   ವಿ.ಆರ್.ಜೋಷಿ- ೯೪೮೦೬೯೬೩೧೯ ಅಥವಾ ಡಾ. ಕಾಂತರಾಜು.ವಿ.-೯೪೮೦೬೯೬೩೧೬ ಇವರನ್ನು ಸಂಪರ್ಕಿಸಬಹುದು  
Please follow and like us:
error