ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ.

ಕೊಪ್ಪಳ ಮಾ. ೦೫ (ಕ ವಾ) ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಮಾ. ೦೬ ರಿಂದ ೦೮ ರವರೆಗೆ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಸಚಿವರು ಮಾ. ೦೬ ರಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿ, ರಾತ್ರಿ ೦೮ ಗಂಟೆಗೆ ಕಾರಟಗಿಗೆ ಆಗಮಿಸುವರು.  ಸಾರ್ವಜನಿಕ ಕುಂದುಕೊರತೆ ವಿಚಾರಣೆ ಕೈಗೊಂಡು ವಾಸ್ತವ್ಯ ಮಾಡುವರು.  ಮಾ. ೦೭ ರಂದು ಕಾರಟಗಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ, ವಾಸ್ತವ್ಯ ಮಾಡುವರು.  ಮಾ. ೦೮ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ಪರಿಹಾರ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.  ಸಂಜೆ ೦೬ ಗಂಟೆಗೆ ಕಾರಟಗಿಗೆ ತೆರಳಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಕೈಗೊಂಡು ವಾಸ್ತವ್ಯ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
Please follow and like us:
error