ಎಚ್.ಎಸ್.ಪಾಟೀಲರಿಗೆ ಸಮ್ಮೇಳನಕ್ಕೆ ಅಧಿಕೃತ ಆಹ್ವಾನ

ತಿರುಳ್ಗನ್ನಡ  ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ 
ಕೊಪ್ಪಳ : ತಿರುಳ್ಗನ್ನಡ   ಕಲೆ, ಸಾಹಿತ್ಯ, ಮತ್ತು ಸಾಂಸ್ಕೃತಿಕ  ಪ್ರತಿಷ್ಠಾನವು ಆಗಷ್ಟ ೨೬ ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿರುವ ತಿರುಳ್ಗನ್ನಡ  ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿಗಳಾದ ಎಚ್.ಎಸ್.ಪಾಟೀಲರಿಗೆ ಭಾಗ್ಯನಗರದ  ಅವರ ನಿವಾಸಕ್ಕೆ ತೆರಳಿ ಅವರನ್ನು ಸನ್ಮಾನಿಸಿ ಸಮ್ಮೇಳನಕ್ಕೆ ಅಧಿಕೃತವಾಗಿ ಅಹ್ವಾನಿಸಲಾಯಿತು. 
ತಿರುಳ್ಗನ್ನಡ   ಕಲೆ, ಸಾಹಿತ್ಯ, ಮತ್ತು ಸಾಂಸ್ಕೃತಿಕ  ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ  ಮಹೇಶಬಾಬು ಸುರ್ವೆ ಹಾಗೂ ತಿರುಳ್ಗನ್ನಡ   ಕಲೆ, ಸಾಹಿತ್ಯ, ಮತ್ತು ಸಾಂಸ್ಕೃತಿಕ  ಪ್ರತಿಷ್ಠಾನದ ಕೊಪ್ಪಳ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ, ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಯ ಅಧ್ಯಕ್ಷರಾದ ಎಂ.ಸಾಧಿಕಲಿ, ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಸಿದ್ದಪ್ಪ ಹಂಚಿನಾಳ, ಪ್ರಕಾಶ ದೇಸಾಯಿ, ಪತ್ರಕರ್ತರ ವೇದಿಕೆಯ ಜಿಲ್ಲಾಧ್ಯಕ್ಷರಾದ ಜಿ.ಎಸ್.ಗೋನಾಳ, ಪತ್ರಕರ್ತರ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷರಾದ  ಹೆಚ್.ಎಸ್.ಹರೀಶ, ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಯ ಹನುಮಂತಪ್ಪ ಹಳ್ಳಿಕೇರಿ, ವೈ.ಬಿ.ಜೂಡಿ, ನಾಗಲಿಂಗಯ್ಯ ಮಠಪತಿ, ಹನುಮಂತಪ್ಪ.ಎಸ್.ಅಬ್ಬಿಗೇರಿ, .ಕಾರ್ಯನಿರತ ಪತ್ರಕರ್ತರ  ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಸುಣಗಾರ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಸವರಾಜ ಆಕಳವಾಡಿ, ಹಿರಿಯ ಸಾಹಿತಿಗಳಾದ ಮಹಾಂತೇಶ ಮಲ್ಲನಗೌಡರ, ಅಲ್ಲಮಪ್ರಭು ಬೆಟ್ಟದೂರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

Leave a Reply