ಅ.೦೫ ರಿಂದ ವಿವಿಧ ಕ್ರೀಡಾಕೂಟಗಳು

 ಕೊಪ್ಪಳ ತಾಲೂಕಾ ಮಟ್ಟದ ಕ್ರೀಡಾಕೂಟಗಳು ಅ.೦೫ ಮತ್ತು ೦೬ ರಂದು ಹಾಗೂ ಕೊಪ್ಪಳ ಜಿಲ್ಲಾಮಟ್ಟದ ಕ್ರೀಡಾಕೂಟಗಳು ಅ.೦೮ ಮತ್ತು ೦೯ ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿವೆ.
  ಪ್ರಸಕ್ತ ಸಾಲಿನ ಕೊಪ್ಪಳ ತಾಲೂಕಾ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟಗಳು ಅ.೦೫ ರಂದು ಹಾಗೂ ಕೊಪ್ಪಳ ತಾಲೂಕಾ ಮಟ್ಟದ ಪ್ರೌಢಶಾಲೆಗಳ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟಗಳು ಅ.೦೬ ರಂದು ನಡೆಯಲಿವೆ.      
     ಕೊಪ್ಪಳ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟಗಳು ಅ.೦೮ ರಂದು ಹಾಗೂ ಕೊಪ್ಪಳ ಜಿಲ್ಲಾ ಮಟ್ಟದ ಪ್ರೌಢ ಶಾಲೆಗಳ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟಗಳನ್ನು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗಿದ್ದು, ಜಿಲ್ಲೆಯ ನಾಲ್ಕು ತಾಲೂಕುಗಳ ವಿಜೇತ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಾರ್ಯಾಲಯ ಕೊಪ್ಪಳದ ಪ್ರಭಾರಿ ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ವೈ.ಸುದರ್ಶನರಾವ್, ಮೊಬೈಲ್ ಸಂಖ್ಯೆ : ೯೪೮೨೪೦೪೮೪೮ ಇವರನ್ನು ಸಂಪರ್ಕಿಸಬಹುದಾಗಿದೆ  
Please follow and like us:
error