ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ

Koppal
ಕೊಪ್ಪಳ ನ ): ಕೊಪ್ಪಳ ತಾಲೂಕು ಬಹದ್ದೂರಬಂಡಿ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆ ನ. ೨೮ ರಂದು ಬೆಳಿಗ್ಗೆ ೧೧ ಗಂಟೆಗೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
         ಬಹದ್ದೂರಬಂಡಿ ಗ್ರಾಮ ಪಂಚಾಯತಿಯಲ್ಲಿ ೨೦೧೧-೧೨ ನೇ ಸಾಲಿನ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ನಡೆಯಲಿದೆ. ಈ ಸಭೆಯಲ್ಲಿ ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ, ಆರೋಗ್ಯದ ಸೌಲಭ್ಯಗಳು, ಆಹಾರದ ಲಭ್ಯತೆ, ಶುದ್ಧ ಕುಡಿಯುವ ನೀರು, ಪಂಚಾಯತಿ ಮಟ್ಟದಲ್ಲಿ ಮಕ್ಕಳ ಮಾಹಿತಿ ಸಂಗ್ರಹದ ಮಾಹಿತಿ ವಿಶ್ಲೇಷಣೆ, ಅನಾಥ ಮಕ್ಕಳು, ಅಂಗವಿಕಲ ಮಕ್ಕಳು, ಹೆಚ್.ಐ.ವಿ ಮತ್ತು ಏಡ್ಸ್ ಪೀಡಿತ ಮಕ್ಕಳು, ಬಾಲಕಾರ್ಮಿಕ ಮತ್ತು ಜೀತ ಕಾರ್ಮಿಕ ಮಕ್ಕಳು, ಬಾಲ್ಯ ವಿವಾಹಕ್ಕೆ ಹಾಗೂ ಮಕ್ಕಳ ಮಾರಾಟ ಮತ್ತು ಸಾಗಾಣಿಗೆ ಒಳಗಾದ ವಿವಿಧ ವರ್ಗದ ಮಕ್ಕಳ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಮಕ್ಕಳು ಮಂಡಿಸಲಿದ್ದಾರೆ.  ಈ ಮಕ್ಕಳ ಜೊತೆಗೆ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಆರೋಗ್ಯ ಕಾರ್ಯಕರ್ತೆಯರು ಕಾರ್ಮಿಕ ನಿರೀಕ್ಷಕರು ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು, ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆಯ ಸಮುದಾಯ ಸಂಘಟಕರು ಭಾಗವಹಿಸುವರು ಎಂದು ಬಹದ್ದೂರಬಂಡಿ ಗ್ರಾ.ಪಂ. ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply