ದೇಶದ ಭವಿಷ್ಯ ಮಕ್ಕಳಲ್ಲಿ ಅಡಗಿದೆ – ಪ್ರಸನ್ನ ಗಡಾದ

 – ದೇಶದ ಉಜ್ವಲ ಭವಿಷ್ಯ ಮಕ್ಕಳಲ್ಲಿ ಅಡಗಿ ಎಂದು ಜಿ.ಪಂ.ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಪ್ರಸನ್ನ ಗಡಾದ ಹೇಳಿದರು.

ಅವರು ತಾಲೂಕಿನ ಗಿಣಿಗೇರಾ ಗ್ರಾಮದ ಬೇಂದ್ರೆ ಪಬ್ಲಿಕ್ ಸ್ಕೂಲ್ ನಲ್ಲಿ  ೬೫ ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.
ಭಾರತ ದೇಶ ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿರುವ ದೇಶ. ಇಂದಿನ ಮಕ್ಕಳೇ ನಾಡಿನ ಪ್ರಜೆಗಳು.ಹೀಗಾಗಿ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಮಹತ್ವದ ಜವಾಬ್ದಾರಿ ಇದೆ ಎಂದು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಅಂಗಡಿ ಮಾತನಾಡಿ ಭಾರತದ ಸಂವಿಧಾನ ರಚಿಸುವಲ್ಲಿ ಡಾ|ಅಂಬೇಡ್ಕರ್ ರ ಕೊಡುಗೆ ಅಪಾರವಾಗಿದೆ. ಮಕ್ಕಳು ಮುಂದಿನ ಭವಿಷ್ಯದಲ್ಲಿ ದೊಡ್ಡ ಮಟ್ಟಕ್ಕೆ ಬೆಳೆಯಲಿ ಎಂದು ಆಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ದೇಶಪಾಂಡೆ ವಹಿಸಿದ್ದರು. ವೇದಿಕೆಯಲ್ಲಿ ಅತಿಥಿಗಳಾಗಿ ರಮೇಶ ತುಪ್ಪದ, ಪೋಷಕರಾದ ಸಂಗಪ್ಪ, ಶಿಕ್ಷಕ ಬಸನಗೌಡ, ಮುಖ್ಯೋಪಾಧ್ಯಾಯ ಬಸವರಾಜ ಶಿರಗುಂಪಿ ಶೆಟ್ಟರ್ ಹಾಜರಿದ್ದರು.

Leave a Reply