ಮೌಲ್ಯಮಾಪನ ಶಿಕ್ಷಕರಿಗೆ ಕಸಾಪ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ನಿಯೋಜಿತಗೊಂಡಿರುವ ಶಿಕ್ಷಕರು  ಏ. ೨೯ ರಂದು ನಡೆಯುವ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಮತದಾನ ಮಾಡಲು ಅರ್ಹರಿದ್ದು, ಮತದಾರರಾಗಿದ್ದಲ್ಲಿ, ಅಂತಹ ಶಿಕ್ಷಕರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಕಸಾಪ ಚುನಾವಣಾಧಿಕಾರಿಯಾಗಿರುವ ಕೊಪ್ಪಳ ತಹಸಿಲ್ದಾರ್ ಬಿ.ಎಲ್. ಘೋಟೆ ಅವರು ತಿಳಿಸಿದ್ದಾರೆ.
  ಈ ಕುರಿತು ಕಸಾಪ ಕೇಂದ್ರ ಚುನಾವಣಾಧಿಕಾರಿ ಎಸ್.ಟಿ. ಮೋಹನರಾಜು ಅವರು ಸ್ಪಷ್ಟನೆ ನೀಡಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಯಲ್ಲಿ ಮತದಾನ ಮಾಡಲು ಮತದಾರರಾಗಿರುವ ಶಿಕ್ಷಕರು, ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ನಿಯೋಜಿತರಾಗಿದ್ದಲ್ಲಿ, ಅಂತಹ ಶಿಕ್ಷಕರು ತಮ್ಮ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಮತದಾನದಲ್ಲಿ ಭಾಗವಹಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಅನುಮತಿ ನೀಡಿದ್ದಾರೆ.  ಈ ಹಿನ್ನೆಲೆಯಲ್ಲಿ ಮೌಲ್ಯಮಾಪಕರು ತಮ್ಮ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಕಸಾಪ ಚುನಾವಣೆಯಲ್ಲಿ ಮತದಾನ ಮಾಡಬಹುದಾಗಿದೆ ಎಂದು ಕೊಪ್ಪಳ ತಹಸಿಲ್ದಾರ್ ಬಿ.ಎಲ್. ಘೋಟೆ ಅವರು ತಿಳಿಸಿದ್ದಾರೆ.
Please follow and like us:
error