ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

 ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ನೀಡಲಾಗುವ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಅರ್ಹ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರನ್ನು ಇಲಾಖೆಯ ಮಾರ್ಗಸೂಚಿ ಪ್ರಕಾರ ಗುರುತಿಸಿ, ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಸಂಬಂಧಿಸಿದ ಶಿಕ್ಷಣ ಸಂಯೋಜಕರು, ಸಿಆರ್‌ಪಿಗಳು ಹಾಗೂ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಿಗೆ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚನೆ ನೀಡಿದ್ದಾರೆ.
  ಕನಿಷ್ಠ ೧೦ ವರ್ಷಗಳ ಸೇವಾವಧಿ ಪೂರೈಸಿರುವ ಹಾಗೂ ಕನಿಷ್ಠ ೫ ವರ್ಷಗಳ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಿರುವ ಶಿಕ್ಷಕರನ್ನು ಆಯ್ಕೆಗಾಗಿ ಪರಿಗಣಿಸಿ ಆ.೧೦ ರೊಳಗಾಗಿ ಸಲ್ಲಿಸುವಂತೆ ಕೊಪ್ಪಳ ಬಿಇಓ  ತಿಳಿಸಿದ್ದಾರೆ.

Leave a Reply