ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ ಕೆ.ಪಿ. ಮೋಹನ್‌ರಾಜ್ ಅಧಿಕಾರ ಸ್ವೀಕಾರ

 ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕೆ.ಪಿ. ಮೋಹನ್‌ರಾಜ್ ಅವರು ಸೋಮವಾರ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರಿಂದ ಅಧಿಕಾರ ವಹಿಸಿಕೊಂಡಿದರು.
  ಜಿಲ್ಲಾಧಿಕಾರಿಯಾಗಿದ್ದ ತುಳಸಿ ಮದ್ದಿನೇನಿ ಅವರ ವರ್ಗಾವಣೆಯಿಂದ ತೆರವಾಗಿದ್ದ  ಹುದ್ದೆಯ ಪ್ರಭಾರವನ್ನು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ವಹಿಸಿಕೊಂಡಿದ್ದರು.   ನಂತರ ಸರ್ಕಾರ ಜಿಲ್ಲಾಧಿಕಾರಿ ಹುದ್ದೆಗೆ ಕೆ.ಪಿ. ಮೋಹನ್ ರಾಜ್ ಅವರನ್ನು ನೇಮಿಸಿ ಆದೇಶ ಹೊರಡಿಸಿತ್ತು.  ಕೆ.ಪಿ. ಮೋಹನ್ ರಾಜ್ ಅವರು ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.  ಅಧಿಕಾರ ವಹಿಸಿಕೊಂಡ ಬಳಿಕ ನೂತನ ಜಿಲ್ಲಾಧಿಕಾರಿಗಳು, ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ವಿವಿಧ ಮಾಹಿತಿ, ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.  ನಂತರ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದರು.  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ, ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಸಹಾಯಕ ಆಯುಕ್ತ ಮಂಜುನಾಥ್, ಎನ್.ಐಸಿ ಅಧಿಕಾರಿ ವೀರಣ್ಣ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Please follow and like us:
error