ವೃತ್ತಿ ಶಿಕ್ಷಣ : ಸಿಇಟಿ ಪರೀಕ್ಷಾ ತರಬೇತಿ ಕೋರ್ಸ್‍ಗೆ ಅರ್ಜಿ ಆಹ್ವಾನ

 ವೃತ್ತಿ ಶಿಕ್ಷಣ ವ್ಯಾಸಂಗಕ್ಕಾಗಿ ಸಿಇಟಿ ಪರೀಕ್ಷೆ ತೆಗೆದುಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಕೋಚಿಂಗ್ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
  ಆಸಕ್ತರು ನಿಗದಿತ ಅರ್ಜಿಯನ್ನು ಹಿಂದುಳಿದ ವರ್ಗಗಳ ನಿರ್ದೇಶನಾಲಯದ   ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಪ್ಪಳ ಇವರಿಗೆ ಆ. 25 ರ ಒಳಗಾಗಿ ಸಲ್ಲಿಸಬೇಕು.  ಹೆಚ್ಚಿನ ವಿವರಗಳು, ಕೋಚಿಂಗ್ ಕೇಂದ್ರಗಳು ಮುಂತಾದ ವಿವರಗಳನ್ನು ವೆಬ್‍ಸೈಟ್‍ನಿಂದ ಪಡೆಯಬಹುದು.

Leave a Reply