ಜ. ೧೦ ರಂದು ಈಶಾನ್ಯದ ಐಸಿರಿ ಸರಣಿಯ ೧೭ ನೇ ಸಂಚಿಕೆ ಪ್ರಸಾರ.

ಕೊಪ್ಪಳ ಜ. ೦೮ (ಕ ವಾ) ಹೈದ್ರಾಬಾದ್ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿ, ಇಲ್ಲಿನ ಕಲೆ, ಸಂಸ್ಕೃತಿ, ಐತಿಹಾಸಿಕ ಹಾಗೂ ಪ್ರವಾಸಿ ತಾಣಗಳು, ಇಲ್ಲಿನ ಪ್ರತಿಭೆಗಳು, ಸಾಧಕರು ಮುಂತಾದ ಸಂಗತಿಗಳನ್ನು ಪರಿಚಯಿಸುವ ಈಶಾನ್ಯದ ಐಸಿರಿ ಸರಣಿಯ ೧೭ ನೇ ಸಂಚಿಕೆ ಜ. ೧೦ ರಂದು ಬೆಳಿಗ್ಗೆ ೧೦ ಗಂಟೆಗೆ ಹೊಸಪೇಟೆ, ರಾಯಚೂರು ಹಾಗೂ ಕಲಬುರಗಿ ಆಕಾಶವಾಣಿ ಕೇಂದ್ರಗಳಿಂದ ಏಕಕಾಲಕ್ಕೆ ಪ್ರಸಾರವಾಗಲಿದೆ.ಹೈ.ಕ.ಪ್ರದೇಶ ಅಭಿವೃದ್ಧಿ ಮಂಡಳಿ ಈ ಸಂಪೂರ್ಣ ಸರಣಿಯನ್ನು ಪ್ರಾಯೋಜಿಸಿದ್ದು, ೧೭ನೇ ಸಂಚಿಕೆಯಲ್ಲಿ ಮೂಡಿ ಬರಲಿರುವ ಕಾರ್ಯಕ್ರಮದ ವಿವರಗಳು ಹೀಗಿವೆ.  ಕಲಬುರಗಿಯ ಜಿಲ್ಲಾ ಉಸ್ತುವಾರಿ ಸಚಿವರೂ, ಎಚ್.ಕೆ.ಆರ್.ಡಿ.ಬಿಯ ಅಧ್ಯಕ್ಷರೂ ಆಗಿರುವ ಡಾ.ಖಮರುಲ್ ಇಸ್ಲಾಂ ಅವರಿಂದ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ.  ರಾಜ್ಯ ಸಭಾ ಸದಸ್ಯರಾಗಿರುವ ಬಸವರಾಜ ಪಾಟೀಲ ಸೇಡಂ ಅವರ ಯೋಚನೆ-ಯೋಜನೆಗಳು.  ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾಗಿರುವ ಎನ್.ಬಿ. ಪಾಟೀಲ ಅವರಿಂದ ವ್ಯಕ್ತಿತ್ವ ವಿಕಸನದ ಪಾಠಮಾಲೆ – ನಿರ್ಧಾರ ಕೈಗೊಳ್ಳುವ ಕೌಶಲ ಕುರಿತು ಸಲಹೆ ಸೂಚನೆ. ನಿವೃತ್ತ ನ್ಯಾಯ ಮೂರ್ತಿ ಎಂ.ಬಿ ಬಿರಾದರ ಅವರಿಂದ ‘ಮಾನವ ಹಕ್ಕುಗಳ’ ಕುರಿತು ಪರಿಚಯ.  ಆಳಂದ ತಾ. ನರೋಣಾ ಗ್ರಾಮದ ಲಕ್ಷ್ಮೀ ಸ್ವ ಸಹಾಯ ಸಂಘದ ಮಹಿಳೆಯರ ಸಾಂಘಿಕ ಶಕ್ತಿಯ ದರ್ಶನ.  ಕಲಬುರಗಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜನಪದ ಕಲಾವಿದೆ ಹನೀಫಾ ಶೇಖ್ ಅವರ ಸಾಧನೆಯ ಹಾದಿ.  ಇವುಗಳ ಜೊತೆಗೆ. ಕಳೆದ ವಾರದಲ್ಲಿ ಈ ಭಾಗದ ಆರು ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್‍ಯಕ್ರಮಗಳು, ಘಟಿಸಿದ ಪ್ರಮುಖ ಸಂಗತಿಗಳನ್ನು ಒಳಗೊಂಡ ‘ವಾರದ ವರದಿ’, ಸಾಮಾಜಿಕ ವಿಷಯಗಳ ಕುರಿತು ಜಿಂಗಲ್, ನುಡಿಮುತ್ತು , ನಗೆಹನಿ ಮೂಡಿ ಬರಲಿವೆ.  ಸರಣಿಯ ನಿರೂಪಣಾ ಸಾಹಿತ್ಯ ಹಾಗೂ ನಿರ್ಮಾಣದ ಜವಾಬ್ದಾರಿಯನ್ನು ಸೋಮಶೇಖರ ಎಸ್. ರುಳಿಯವರು ವಹಿಸಿಕೊಂಡಿದ್ದಾರೆ ಎಂದು ಕಲಬುರಗಿ ಆಕಾಶವಾಣಿ ಕೇಂದ್ರದ ಮುಖ್ಯಸ್ಥೆ ಅಂಜನಾ ಯಾತನೂರ ತಿಳಿಸಿದ್ದಾರೆ.
Please follow and like us:
error