fbpx

ನಾಳೆ ಕರ್ನಾಟಕ ಯುವ ಜಾಗೃತಿ ವೇದಿಕೆಯ ನೂತನ ಸಂಘಟನೆ ಉದ್ಘಾಟನೆ, ಜಿಲ್ಲಾ ಮಟ್ಟದ ಸಮಾವೇಶ.

ಕೊಪ್ಪಳ, ಅ. ೦೭: ಕರ್ನಾಟಕ ಯುವ ಜಾಗೃತಿ ವೇದಿಕೆ ಜಿಲ್ಲಾ ಸಮಿತಿ ಉದ್ಘಾಟನೆ ಹಾಗೂ ಜಿಲ್ಲಾ ಮಟ್ಟದ ಸಮಾವೇಶವನ್ನು ಇದೇ ದಿ.೯ ರಂದು ರವಿವಾರ ನಗರದ ಸಾಹಿತ್ಯ  ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ ೧೦.೩೦ ಕ್ಕೆ ಜರುಗುವ ಕಾರ್ಯಕ್ರಮದಲ್ಲಿ ಸಂಸ್ಥಾನಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಸಾನಿದ್ಯವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸ್ಥಳೀಯ ಶಾಸಕ ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಸಂಗಣ್ಣ ಕರಡಿ, ಕರ್ನಾಟಕ ಯುವ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಯಾಳ್ಪಿ ವಲಿಬಾಷಾ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಪಾಟೀಲ, ಇಕ್ಬಾಲ್ ಅನ್ಸಾರಿ, ಮಾಜಿ ಶಾಸಕರುಗಳಾದ ಪರಣ್ಣ ಮುನವಳ್ಳಿ, ಅಮರೇಗೌಡ ಬಯ್ಯಾಪುರ, ಕೈಮಗ್ಗ ನಿಗಮದ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ನಾಗಪ್ಪ, ವಿಧಾನ ಪರಿಷತ್ ಸದಸ್ಯ ಹೆಚ್.ಆರ್.ಶ್ರೀನಾಥ  ಸೇರಿದಂತೆ ಕೆ.ಎಂ.ಸಯ್ಯದ್, ವಿರುಪಾಕ್ಷಪ್ಪ ಸಿಂಗನಾಳ, ಪ್ರದೀಪ ಹಾನಗಲ್, ದೊಡ್ಡಪ್ಪ ದೇಸಾಯಿ, ಗಂಗಾವತಿ ನಗರಸಭೆ ಅಧ್ಯಕ್ಷ ಕೆ.ವೆಂಕಟೇಶ, ಮಾಜಿ ಅಧ್ಯಕ್ಷ ಶ್ಯಾಮೀದ್ ಮನಿಯಾರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆಂದು ವೇದಿಕೆ ಜಿಲ್ಲಾಧ್ಯಕ್ಷ ಖಾಜಾಪಾಷಾ ಹಾಗೂ ಜಿಲ್ಲಾಉಪಾಧ್ಯಕ್ಷ ನಾಗರಾಜ ಭೋವಿ ಜಂಟಿ ನೀಡಿದ್ದಾರೆ.
Please follow and like us:
error

Leave a Reply

error: Content is protected !!