ಜೂ. ೨೫ ರಂದು ಪ್ರಿಯದರ್ಶಿನಿ ಮಾರಾಟ ಮಳಿಗೆ ಉದ್ಘಾಟನೆ

ಕೊಪ್ಪಳ ಜೂ. : ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದಿಂದ ಕೊಪ್ಪಳದ ಜವಾಹರ ರಸ್ತೆಯಲ್ಲಿ ಪ್ರಾರಂಭವಾಗಲಿರುವ ಪ್ರಿಯದರ್ಶಿನಿ ಹ್ಯಾಂಡ್‌ಲೂಮ್ಸ್ ನೂತನ ಮಾರಾಟ ಮಳಿಗೆಯ ಉದ್ಘಾಟನಾ ಸಮಾರಂಭ ಜೂ. ೨೫ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ನಡೆಯಲಿದೆ.
ನಗರದ ಜವಾಹರ ರಸ್ತೆಯ ಮುಖ್ಯ ಅಂಚೆ ಕಚೇರಿ ಎದುರು ನಗರಸಭೆ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭವಾಗಲಿರುವ ಪ್ರಿಯದರ್ಶಿನಿ ಹ್ಯಾಂಡ್‌ಲೂಮ್ಸ್ ಮಾರಾಟ ಮಳಿಗೆಯ ಪ್ರಾರಂಭೋತ್ಸವ ಜೂ. ೨೫ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಮಳಿಗೆಯ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಸಣ್ಣ ನೀರಾವರಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜವಳಿ ಸಚಿವ ಗೋವಿಂದ ಕಾರಜೋಳ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಸುನೀಲ ವಲ್ಲ್ಯಾಪುರ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ ಅಮರೇಗೌಡ ಬಯ್ಯಾಪುರ, ಈಶಣ್ಣ ಗುಳಗಣ್ಣವರ್, ಪರಣ್ಣ ಮುನವಳ್ಳಿ, ಶಿವರಾಜ ಎಸ್ ತಂಗಡಗಿ, ಶಶಿಲ್ ನಮೋಶಿ, ಹೆಚ್.ಸಿ. ನೀರಾವರಿ, ಮನೋಹರ ಮಸ್ಕಿ, ಹಾಲಪ್ಪ ಆಚಾರ್, ಜಿ.ಪಂ. ಉಪಾಧ್ಯಕ್ಷೆ ಸೀತಾ ಹಲಗೇರಿ, ತಾ.ಪಂ. ಅಧ್ಯಕ್ಷ ಅಮರೇಶ ಉಪಲಾಪುರ, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ ಸೇರಿದಂತೆ ಗಣ್ಯರು, ಉನ್ನತ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ಮೊಹ್ಸಿನ್ ಅವರು ತಿಳಿಸಿದ್ದಾರೆ.

Please follow and like us:
error