ನಿಷ್ಠರನ್ನು ಚುನಾವಣೆಯಲ್ಲಿ ಇಳಿಸಿ, ಗೆಲ್ಲಿಸುತ್ತೇನೆ – ಶಿವರಾಜ ತಂಗಡಗಿ

ಕಾರಟಗಿ : ತಾಲೂಕು ಪಂಚಾಯ್ತಿ, ಜಿ.ಪಂ. ಚುನಾವಣೆಗಳಲ್ಲಿ ತಮ್ಮ ಬೆಂಬಲಿಗರನ್ನು ಚುನಾವಣಾ ಅಖಾಡಕ್ಕೆ ಇಳಿಸಿ, ಗೆಲ್ಲಿಸುತ್ತೇನೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಆದರೆ ನೆರವಾಗುತ್ತೇನೆ. ಕಾರ್ಯಕರ್ತರ ಜತೆ ಚರ್ಚಿಸಿ ಯಾವ ಪಕ್ಷಕ್ಕೆ ಸೇರಬೇಕು ಎನ್ನುವುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದರು. ಮುಖ್ಯಮಂತ್ರಿ ಯಡಿಯೂರಪ್ಪ ಲಜ್ಜೆಗೇಡಿ ವ್ಯಕ್ತಿಯಾಗಿದ್ದು, ಭೂಕಬಳಿಕೆ ಮಾತ್ರವಲ್ಲ ಇತರ ಇಲಾಖೆಗಳಲ್ಲೂ ಸಾಕಷ್ಟು ಹಗರಣಗಳಿವೆ. ಶಿಸ್ತಿನ ಪಕ್ಷವೆಂದು ಹೇಳಿಕೊಳ್ಳುವ ಬಿಜೆಪಿಯ ರಾಷ್ಟ್ರೀಯ ಮುಖಂಡರು ಭ್ರಷ್ಟ ವ್ಯಕ್ತಿಯನ್ನು ಅಧಿಕಾರದಲ್ಲಿ ಮುಂದುವರಿಸುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು. ತಾ.ಪಂ., ಜಿ.ಪಂ. ಚುನಾವಣೆಯಲ್ಲಿ ಯಡಿಯೂರಪ್ಪ ಯಾವ ಮುಖ ಇಟ್ಟುಕೊಂಡು ಮತಯಾಚನೆ ಮಾಡಲಿದ್ದಾರೆ ಎನ್ನುವುದನ್ನು ನೋಡಬೇಕಾಗಿದೆ. ಕಾನೂನಿನ ಮೇಲೆ ವಿಶ್ವಾಸವಿದ್ದು, ಗೆದ್ದೇ ಗೆಲ್ಲುತ್ತೇನೆ ಎನ್ನುವ ವಿಶ್ವಾಸವಿದೆ ಎಂದರು.

Leave a Reply