ಖಾಸಗಿ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ಕೊಪ್ಪಳ   : ಪದವಿಪೂರ್ವ ಶಿಕ್ಷಣ ಇಲಾಖೆಯು ಕೊಪ್ಪಳ ಜಿಲ್ಲೆಯಲ್ಲಿ ಹೊಸದಾಗಿ ಅನುದಾನ   ಖಾಸಗಿ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಪದವಿ ಪೂರ್ವ ಶಿಕ್ಷಣ (ಶೈಕ್ಷಣಿಕ, ನೋಂದಣಿ, ಆಡಳಿತ ಮತ್ತು ಸಹಾಯಾನುದಾನ ಇತ್ಯಾದಿ) ನಿಯಮಗಳು, ೨೦೦೬ ರ ಪ್ರಕಾರ, ೨೦೧೨-೧೩ ನೇ ಶೈಕ್ಷಣಿಕೆ ಸಾಲಿನಲ್ಲಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಇಚ್ಛೆಯುಳ್ಳ ನೋಂದಾಯಿತ ಮಂಡಳಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯನ್ನು ಅಕ್ಟೋಬರ ೩೧ ರೊಳಗಾಗಿ ನಿರ್ದೇಶಕರ ಕಚೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ೧೮ನೇ ಅಡ್ಡರಸ್ತೆ ಮಲ್ಲೇಶ್ವರಂ, ಬೆಂಗಳೂರು-೧೨ ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Please follow and like us:
error

Related posts

Leave a Comment