ನಗರದಲ್ಲಿ ಸಚಿವ ಬಸವರಾಜ ಬೊಮ್ಮಾಯಿ

ಕೊಪ್ಪಳ ಜು. : ರಾಜ್ಯ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ಜು. ೩ ರಂದು ಸಂಜೆ ಕೊಪ್ಪಳ ನಗರಕ್ಕೆ ಆಗಮಿಸಿದರು.
ಸಚಿವರು ಕೊಪ್ಪಳ ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸಿ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ ಅವರೊಂದಿಗೆ ಸಿಂಗಟಾಲೂರು ಏತನೀರಾವರಿ ಯೋಜನೆ ಸೇರಿದಂತೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಮಾಲೋಚನೆ ನಡೆಸಿದರು. ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ಗಣ್ಯರಾದ ಅಂದಾನಪ್ಪ ಅಗಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error

Related posts

Leave a Comment