ನೂತನ ಜಿಲ್ಲಾಧಿಕಾರಿಯಾಗಿ ರಮಣದೀಪ್ ಚೌದರಿ ಅಧಿಕಾರ ಸ್ವೀಕಾರ.

ಕೊಪ್ಪಳ, ಆ.೧೭ (ಕ ವಾ) ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಮಣದೀಪ್ ಚೌದರಿ ಅವರು ಸೋಮವಾರದಂದು ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿದ್ದ ಆರ್.ಆರ್. ಜನ್ನು ಅವರು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ವರ್ಗಾವಣೆಗೊಂಡು, ರಮಣದೀಪ್ ಚೌದರಿ ಅವರು ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು.  ಆರ್.ಆರ್. ಜನ್ನು ಅವರು ರಮಣದೀಪ್ ಚೌದರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.  ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ೨೦೦೮ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ರಮಣದೀಪ್ ಚೌದರಿ ಅವರು, ಈ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಆಯುಕ್ತರಾಗಿ, ನಂತರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಆಯುಕ್ತರಾಗಿ ಮತ್ತು ಕೊಪ್ಪಳ ಜಿಲ್ಲಾಧಿಕಾರಿಯಾಗಿ ವರ್ಗವಾಗುವ ಪೂರ್ವದಲ್ಲಿ ಧಾರವಾಡ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Please follow and like us:
error