ಬೆಲೆ ಏರಿಕೆ ವಿರೋಧಿಸಿ ಸಿಪಿಐ ಪ್ರತಿಭಟನೆ

ಬೆಲೆ ಏರಿಕೆ ವಿರೋಧಿಸಿ ಸಿಪಿಐ ಪ್ರತಿಭಟನೆ ಕೊಪ್ಪಳ : ಬೆಲೆ ಏರಿಕೆ ವಿರೋಧಿಸಿ ಸಿಪಿಐ ಕೊಪ್ಪಳ ಜಿಲ್ಲಾ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕಿನ್ನಾಳ ರಸ್ತೆಯಿಂದ ಆರಂಭವಾದ ಪ್ರತಿಭಟನೆಯು ನಗರದ ಬಸ್ ನಿಲ್ದಾಣದಲ್ಲಿ ಪ್ರತಿಕೃತಿ ದಹನ ಮಾಡುವುದರ ಮೂಲಕ ಮುಂದುವರೆಸಿದರು. ನಂತರ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಸಿಪಿಐ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಸವರಾಜ ಶೀಲವಂತರ, ಗಾಳೆಪ್ಪ ಮುಂಗೋಲಿ, ಮಮ್ತಾಜ್ ಬೇಂಗಂ, ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply