ಆ.೨೮ ರಂದು ತಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ

ಕೊಪ್ಪಳ, ಆ.೨೬ (ಕ ವಾ) ಕೊಪ್ಪಳ ತಾಲೂಕಾ ಪಂಚಾಯಿತಿಯ ಪ್ರಸಕ್ತ ಸಾಲಿನ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಆ.೨೮ ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕಾ  ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
     ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಬಂಧಪಟ್ಟ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಜೂನ್ ೨೦೧೫ ರವರೆಗಿನ ತಮ್ಮ ಇಲಾಖೆ ಸಾಧಿಸಿದ ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ತಾಲೂಕಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
ಆ. ೨೭ ರಂದು ಸದ್ಭಾವನಾ ದಿನ.
ಕೊಪ್ಪಳ ಆ. ೨೬ (ಕ ವಾ) ಇದೇ ಆ. ೨೭ ರ ದಿನವನ್ನು ಸದ್ಭಾವನಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಅಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಣದಲ್ಲಿ ಸದ್ಭಾವನಾ ದಿನದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
       ರಾಜ್ಯ ಸರ್ಕಾರವು ಸೆ. ೦೩ ರವರೆಗೆ ಕೋಮು ಸೌಹಾರ್ದ ಪಾಕ್ಷಿಕ (ಅommuಟಿಚಿಟ ಊಚಿಡಿmoಟಿಥಿ ಈoಡಿಣಟಿigಥಿ) ವನ್ನಾಗಿ ಆಚರಿಸುವಂತೆ ಸೂಚನೆ ನೀಡಿದ್ದು, ಆ. ೨೭ ರಂದು ಸದ್ಭಾವನಾ ದಿನವನ್ನಾಗಿ ಆಚರಿಸಲಾಗುವುದು.  ಇದರ ನಿಮಿತ್ಯ ಅಂದು ಬೆ. ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾ ವಿಧಿ ಸ್ವೀಕಾರ ನಡೆಯಲಿದೆ.  ಜಿಲ್ಲಾಡಳಿತ ಭವನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಇಲಾಖಾ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡು ಪ್ರತಿಜ್ಞಾ ವಿಧಿ ಸ್ವೀಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣ್ ಕುಮಾರ್ ಜಿ.ಎಲ್. ಅವರು ತಿಳಿಸಿದ್ದಾರೆ.
ಅಂಗನವಾಡಿ ಹುದ್ದೆ ಅರ್ಜಿ ಸಲ್ಲಿಕೆಗೆ ಆ. ೩೧ ಕೊನೆಯ ದಿನ.
ಕೊಪ್ಪಳ, ಆ.೨೬ (ಕ ವಾ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಖಾಲಿ ಇರುವ ೦೪ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ೩೧ ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
     ಅರ್ಜಿ ಸಲ್ಲಿಸಲು ಆ.೩೧ ಕೊನೆ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಗಂಗಾವತಿ ಇವರನ್ನು ಕಛೇರಿ ವೇಳೆಯಲ್ಲಿ   ಸಂಪರ್ಕಿಸಬಹುದಾಗಿದೆ.
Please follow and like us:
error