ಯೋಗ್ಯ ಸಮರ್ಥ ವ್ಯಕ್ತಿಯನ್ನು ಆಯ್ಕೆ ಮಾಡಿ

ಕೊಪ್ಪಳ : ಈಗ ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಯೋಗ್ಯ, ಸಮರ್ಥ, ಸಮಾಜ ಸೇವಕರನ್ನು ಆಯ್ಕೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮನವಿ ಮಾಡಿದರು.ಕೊಪ್ಪಳದ ಶ್ರೀಗವಿಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು ಬಿಜೆಪಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಹಾಳುಮಾಡುತ್ತಿದೆ. ಪಂಚಾಯತಿಗಲಿಗೆ ಉಸ್ತುವಾರಿ ಸಮಿತಿ ನೇಮಕ ಮಾಡುವ ಇಚ್ಛೆ ಹೊಂದಿದ್ದು ಪಂಚಾಯತ್ ರಾಜ್ ವ್ಯವಸ್ಥೆಗೆ ಅವಮಾನ ಮಾಡುತ್ತಿದೆ. ಕೇಂದ್ರದಲ್ಲಿ 6 ವರ್ಷ, ರಾಜ್ಯದಲ್ಲಿ 2 ವರ್ಷದಿಂದ ಬಿಜೆಪಿ ಅಧಿಕಾರದಲ್ಲಿದ್ದರೂ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಲಾಗಿಲ್ಲ. ಸಂವಿಧಾನದ 73ನೇ ತಿದ್ದುಪಡಿ ಮಾಡಿ ರಾಜೀವಗಾಂಧಿ ಎಸ್ ಸಿ ಎಸ್ಟಿ, ಹಿಂದುಳಿದ ವರ್ಗದವರಿಗೆ ಮೀಸಲು ಕೊಟ್ಟಿದ್ದರಿಂದ ಜಿಲ್ಲಾ ಪಂಚಾಯತ್, ತಾಲುಕ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಗಳಲ್ಲಿ ಆಯಾ ವ್ಯಕ್ತಿಗಳಿಗೆ ಮಾನ್ಯತೆ ಸಿಕ್ಕಿದೆ. ಸೋನಿಯಾ ಗಾಂಧಿಯವರು ಬೇಲೂರು ಘೋಷಣೆ ಮೂಲಕ 29 ಇಲಾಖೆಗಳನ್ನು ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಸೇರಿಸಿದರು. ಈಗ 33% ಮಹಿಳಾ ಮೀಸಲಾತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕಾಂಗ್ರೆಸ್ ನ ಹೆಗ್ಗಳಿಕೆಯಾಗಿದೆ. ಈ ಸಲದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಯೋಗ್ಯ, ಸಮರ್ಥ, ಸಮಾಜ ಸೇವಕರಿಗೆ ಆಯ್ಕೆ ಮಾಡಬೇಕು ಎಂದು ಮನವಿಮಾಡಿಕೊಂಡರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಕಾಂಗ್ರೆಸ್ ಸಂವಿಧಾನದಲ್ಲಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಗೆ ಆಯ್ಕೆಯಾಗಿದ್ದ ಬಿಜೆಪಿಯ ಏಕೈಕ ಸದಸ್ಯ ಬಾಲಪ್ಪ ಹೂಗಾರ್ ಕಾಂಗ್ರೆಸ್ ಪಕ್ಷ ಸೇರಿದರು.

Related posts

Leave a Comment