ಲೋಕಾಯುಕ್ತ ಡಿವೈಎಸ್‌ಪಿ ಪ್ರವಾಸ ಕುಂದು, ಕೊರತೆ ದೂರು ಆಹ್ವಾನ.

ಕೊಪ್ಪಳ, ಜೂ.೨೬- ಕೊಪ್ಪಳ ಲೋಕಾಯುಕ್ತ ಡಿವೈಎಸ್‌ಪಿ ಅವರು ಜೂನ್ ೨೭ ರಂದು ಗಂಗಾವತಿ ಮತ್ತು ಜೂ.೩೦ ರಂದು ಕುಷ್ಟಗಿ ಮತ್ತು ಯಲಬುರ್ಗಾ ಪ್ರವಾಸ ಹಮ್ಮಿಕೊಂಡಿದ್ದಾರೆ.ಲೋಕಾಯುಕ್ತ ಡಿವೈಎಸ್‌ಪಿ ಅವರು ಜೂ.೨೭ ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೦೧ ಗಂಟೆಯವರೆಗೆ ಗಂಗಾವತಿ ಪ್ರವಾಸಿ ಮಂದಿರದಲ್ಲಿ ಹಾಗೂ ಜೂ.೩೦ ರಂದು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೦೧ ಗಂಟೆಯವರೆಗೆ ಕುಷ್ಟಗಿ ಪ್ರವಾಸಿ ಮಂದಿರದಲ್ಲಿ, ಅದೇ ದಿನ ಮಧ್ಯಾಹ್ನ ೦೨ ಗಂಟೆಯಿಂದ ಸಂಜೆ ೦೪ ರವರೆಗೆ ಯಲಬುರ್ಗಾದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರುಗಳನ್ನು ಸ್ವೀಕರಿಸಿ, ಅಹವಾಲುಗಳನ್ನು ಆಲಿಸಲಿದ್ದಾರೆ.ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಬಗ್ಗೆ ಅರ್ಜಿಗಳನ್ನು ನೀಡಿ ಸದುಪಯೋಗ ಪಡೆಯಲು ಸಾರ್ವಜನಿಕರಲ್ಲಿ ಕೋರಲಾಗಿದೆ. ಅಲ್ಲದೇ ದೂರು ಸಲ್ಲಿಸಲು ಬೇಕಾಗುವ ಪ್ರಪತ್ರ ಸಂಖ್ಯೆ ೧ ಮತ್ತು ೨ ಲಭ್ಯವಿದ್ದು ಸ್ಥಳದಲ್ಲಿಯೇ ಪಡೆಯಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆರಕ್ಷಕ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಕೊಪ್ಪಳ. ದೂರವಾಣಿ ಸಂಖ್ಯೆ : ೦೮೫೩೯-೨೨೦೫೩೩, ೦೮೫೩೯-೨೨೦೨೦೦ ಗಳಿಗೆ ಸಂಪರ್ಕಿಸಬಹುದಾಗಿದೆ.
Please follow and like us:
error