ಜು. ೨೩ ರಂದು ಬೆಂಗಳೂರಿನಲ್ಲಿ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ.

ಕೊಪ್ಪಳ ಜು. ೨೧ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಮುಂಗಾರು ಹಂಗಾಮಿನ ೧೦೧ನೇ ಸಭೆ ಜು. ೨೩ ರಂದು ಸಂಜೆ ೪-೩೦ ಗಂಟೆಗೆ ಬೆಂಗಳೂರು ವಿಕಾಸಸೌಧದ ಕೊಠಡಿ ಸಂಖ್ಯೆ ೨೨೨ ರ ಸಭಾಂಗಣದಲ್ಲಿ ಜರುಗಲಿದೆ.ಸಭೆಯ ಅಧ್ಯಕ್ಷತೆಯನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರು ವಹಿಸುವರು.  ಸಭೆಯಲ್ಲಿ ಕಾಡಾ ಅಧ್ಯಕ್ಷರು, ಕೊಪ್ಪಳ, ರಾಯಚೂರು, ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಲೋಕಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಪಾಲ್ಗೊಳ್ಳುವರು ಎಂದು ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
Please follow and like us:

Leave a Reply