ಬಡ ಮಹಿಳೆಯರ ಬದುಕಿಗಾಗಿ ಸ್ವ-ಸಹಾಯ ಸಂಘಗಳ ಬಲವರ್ಧನೆ :ಕೃಷ್ಣ ಡಿ ಉದಪುಡಿ

 ಬಡ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವಲ್ಲಿ ಸ್ವ-ಸಹಾಯ ಸಂಘಗಳನ್ನು ಬಲವರ್ಧನೆಗೊಳಿಸಲು ಸಂಜೀವಿನಿ ಯೋಜನೆ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಅವರು ಹೇಳಿದರು.
  ಕುಷ್ಟಗಿ ತಾಲೂಕಾ ಪಂಚಾಯತಿ ಸಭಾಂಗಣದಲ್ಲಿ ಸಂಜೀವಿನಿ ಯೋಜನೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
  ಶಿಕ್ಷಕರು ಮಕ್ಕಳನ್ನು ಸರಿ ದಾರಿಗೆ ತರಲು ಶ್ರಮಿಸುವ ಮಾದರಿಯಲ್ಲಿ, ಸ್ವ-ಸಹಾಯ ಸಂಘಗಳ ಮಹಿಳೆಯರಿಗೆ ಅರಿವು ಮೂಡಿಸಿ ಅವರನ್ನು ಒಗ್ಗಟ್ಟಿಗೆ ತಂದು ಬಡತನ ನಿರ್ಮೂಲನೆ ಮಾಡುವ ಉದ್ದೇಶದಿಂದ ಸಂಜೀವಿನಿ ಯೋಜನೆ ಕಾರ್ಯ ನಿರ್ವಹಿಸಲಿದೆ.  ಸ್ವ-ಸಹಾಯ ಸಂಘಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗುವಂತೆ ಮಾಡಲು ಸಂಜೀವಿನಿ ಯೋಜನೆಯನ್ನು ಕುಷ್ಟಗಿ ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.  ಮಹಿಳಾ ಸ್ವ-ಸಹಾಯ ಸಂಘಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಕರೆ ನೀಡಿದರು.
  ಜಿಲ್ಲಾ ಪಂಚಾಯ್ತಿಯ ಯೋಜನಾ ನಿರ್ದೇಶಕರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಯಾದÀ ಬಿ. ಕಲ್ಲೇಶ ಮಾತನಾಡಿ,   ಸ್ವ-ಸಹಾಯ ಸಂಘಗಳಲ್ಲಿ ಪ್ರಸ್ತುತ ಇರುವ ದ್ವಿ-ಸದಸ್ಯತ್ವ ಪಂಚಸೂತ್ರಗಳ ಪಾಲನೆ ಮಾಡದಿರುವದು ಮುಂತಾದ ಸಮಸ್ಯೆಗಳಿದ್ದು ಅವುಗಳನ್ನು ಬಗೆಹರಿಸಿ ಉತ್ತಮ ಆದರ್ಶ ಸ್ವ-ಸಹಾಯ ಸಂಘಗಳನ್ನಾಗಿ ರೂಪಿಸಿ ಗ್ರಾಮ ಸಂಘಟನೆಗಳನ್ನು ರಚನೆ ಮಾಡುವುದರ ಮೂಲಕ ಅಭಿವೃದ್ದಿಪಡಿಸಿ ಮಾದರಿ ತಾಲ್ಲೂಕನ್ನಾಗಿ ಮಾಡಲು ಮನವಿ ಮಾಡಿಕೊಂಡರು
  ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ವ್ಯವಸ್ಥಾಪಕ ಬಸವರಾಜ ಮೂಲಿಮನಿ, ಜಿಲ್ಲಾ ವ್ಯವಸ್ಥಾಪಕ ಕಾಶೀನಾಥ ಕನಕೇರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ವಿ. ಬದಿ,  ಮುಂತಾದವರು ಉಪಸ್ಥಿತರಿದ್ದರು.
Please follow and like us:
error