You are here
Home > Koppal News > ಏ.೧೧ ರಂದು ಆನೆಗೊಂದಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಉದ್ಘಾಟನೆ

ಏ.೧೧ ರಂದು ಆನೆಗೊಂದಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಉದ್ಘಾಟನೆ

ಕೊಪ್ಪಳ ಏ.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಏ. ೧೧ ಮತ್ತು ೧೨ ರಂದು ವಿಜೃಂಭಣೆಯಿಂದ ಆಚರಿಸಲಾಗುತ್ತಿರುವ ಆನೆಗೊಂದಿ ಉತ್ಸವದ ಉದ್ಘಾಟನಾ ಸಮಾರಂಭ ಏ. ೧೧ ರಂದು ಸಂಜೆ ೫ ಗಂಟೆಗೆ ಆನೆಗೊಂದಿ ಗ್ರಾಮದ ಹೊರವಲಯದಲ್ಲಿ ನಿರ್ಮಿಸಲಾಗಿರುವ ಶ್ರೀಕೃಷ್ಣದೇವರಾಯ ವೇದಿಕೆಯಲ್ಲಿ ಜರುಗಲಿದೆ.
  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆನೆಗೊಂದಿ ಉತ್ಸವದ ಉದ್ಘಾಟನೆ ನೆರವೇರಿಸುವರು.  ಕರ್ನಾಟಕ ವಿಧಾನಸಭೆಯ ಸಭಾಪತಿ ಕಾಗೋಡು ತಿಮ್ಮಪ್ಪ ಅವರ ಘನ ಉಪಸ್ಥಿತಿಯಲ್ಲಿ ಜರುಗುವ ಈ ಸಮಾರಂಭದ ಅಧ್ಯಕ್ಷತೆಯನ್ನು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಅವರು ವಹಿಸುವರು.  ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನ ನೆರವೇರಿಸುವರು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ಎಚ್.ಕೆ. ಪಾಟೀಲ್ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು.  ಮುಖ್ಯ ಅತಿಥಿಗಳಾಗಿ ಮೂಲಭೂತ ಸೌಲಭ್ಯ ಅಭಿವೃದ್ಧಿ, ವಾರ್ತಾ ಮತ್ತು ಹಜ್ ಸಚಿವ ರೋಷನ್ ಬೇಗ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ದೊಡ್ಡನಗೌಡ ಪಾಟೀಲ್, ರಾಘವೇಂದ್ರ ಹಿಟ್ನಾಳ್, ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರು, ಅಮರನಾಥ ಪಾಟೀಲ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಎಲ್. ಹನುಮಂತಯ್ಯ, ತುಂಗಭದ್ರಾ ಕಾಡಾ ಅಧ್ಯಕ್ಷ ಎ. ವಸಂತಕುಮಾರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ್, ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ತಾ.ಪಂ. ಅಧ್ಯಕ್ಷೆ ಈರಮ್ಮ ಮುದಿಯಪ್ಪ, ಜಿ.ಪಂ. ಸದಸ್ಯೆ ವಿಜಯಲಕ್ಷ್ಮೀ ರಾಮಕೃಷ್ಣ, ತಾ.ಪಂ. ಸದಸ್ಯೆ ರಾಜೇಶ್ವರಿ ಸುರೇಶ್, ಆನೆಗೊಂದಿ ಗ್ರಾ.ಪಂ. ಅಧ್ಯಕ್ಷ ರಾಜೇಶ್ ಅವರು ಭಾಗವಹಿಸುವರು.  ವಿಜಯನಗರದ ಅರಸು ಮನೆತನದವರಾದ ಶ್ರೀರಂಗದೇವರಾಯಲು ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. 

Leave a Reply

Top