ವಾಲ್ಮೀಕಿ ಜಯಂತಿ ಸಭೆ ಅ. ೧೯ ಕ್ಕೆ ಮುಂದೂಡಿಕೆ.

ಕೊಪ್ಪಳ ಅ. ೧೪ (ಕ ವಾ) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಸಿದ್ಧತಾ ಸಭೆಯನ್ನು ಪ್ರಭಾರಿ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ಅ. ೧೯ ಕ್ಕೆ ಮುಂದೂಡಿದರು.
     ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಪೂರ್ವ ಭಾವಿ ಸಭೆ ಏರ್ಪಡಿಸಲಾಗಿತ್ತು.  ಗಂಗಾವತಿ ತಾಲೂಕಿನಲ್ಲಿ ಪ.ಪಂಗಡದ ಸುಳ್ಳು ಜಾತಿ ಪ್ರಮಾಣ ಪತ್ರ ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.  ವಾಲ್ಮೀಕಿ ಭವನ ಸೇರಿದಂತೆ ಸಮುದಾಯ ಭವನಗಳ ನಿರ್ಮಾಣಕ್ಕೆ ನಿವೇಶನ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಜಿಲ್ಲಾಡಳಿತ ಮತ್ತು ಗಂಗಾವತಿ ತಾಲೂಕು ಆಡಳಿತ ಕ್ರಮ ಕೈಗೊಳ್ಳುವಲ್ಲಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ, ವಾಲ್ಮೀಕಿ ಸಮಾಜದ ಹಲವು ಮುಖಂಡರು ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದರು.  ಇದಕ್ಕೆ ಸ್ಪಂದಿಸಿದ ಪ್ರಭಾರಿ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು, ಪ್ರಕರಣದ ಬಗ್ಗೆ ಇತ್ತೀಚೆಗಷ್ಟೇ ತಮ್ಮ ಗಮನಕ್ಕೆ ಬಂದಿದೆ.  ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.  ಸುಳ್ಳು ಜಾತಿ ಪ್ರಮಾಣ ಪತ್ರ ವಿತ
     ಸಭೆಯಲ್ಲಿ ವಾಲ್ಮೀಕಿ ಸಮಾಜದ ಹಲವು ಮುಖಂಡರು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ರಣೆ ಕುರಿತಂತೆ ಸ್ಥಳಕ್ಕೆ ಕೂಡಲೆ ಭೇಟಿ ನೀಡಿ ವಿಚಾರಣೆ ನಡೆಸುವಂತೆ ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಅವರಿಗೆ ಸೂಚನೆ ನೀಡಲಾಗಿದೆ.  ಎಲ್ಲ ಮುಖಂಡರು ಸಮಾಧಾನ ವಹಿಸಿ, ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯ ಚರ್ಚೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿಕೊಂಡರು.  ಜಿಲ್ಲಾಧಿಕಾರಿಗಳ ಮನವಿಯ ನಡುವೆಯೂ, ಸಮಾಜದ ಮುಖಂಡರು ಸಭೆಯಿಂದ ಹೊರನಡೆದರು.  ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಹಾಗೂ ಕನ್ನಡ ರಾಜ್ಯೋತ್ಸವ ಸಿದ್ಧತಾ ಸಭೆಯನ್ನು ಪುನಃ ಅ. ೧೯ ರಂದು ಸಂಜೆ ೦೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಿಸಿದರು.

Please follow and like us:
error

Related posts

Leave a Comment