You are here
Home > Koppal News > ದಲಿತ ಸಾಹಿತ್ಯ ಕೃತಿಗೆ ದತ್ತಿನಿಧಿ ಪ್ರಶಸ್ತಿ : ಅರ್ಜಿ ಆಹ್ವಾನ

ದಲಿತ ಸಾಹಿತ್ಯ ಕೃತಿಗೆ ದತ್ತಿನಿಧಿ ಪ್ರಶಸ್ತಿ : ಅರ್ಜಿ ಆಹ್ವಾನ

 :ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಾ.ಎಲ್.ಬಸವರಾಜು ಅವರ ಹೆಸರಿನ ಒಂದು ಲಕ್ಷ ರೂ. ಮೊತ್ತದ ದತ್ತಿನಿಧಿ ಅಮೃತ ಮಹೋತ್ಸವ ಸವಿ ನೆನಪಿನ ದತ್ತಿ ನಿಧಿಗೆ ಉತ್ತಮ ದಲಿತ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ. 
೨೦೧೨ನೇ ಸಾಲಿನಲ್ಲಿ ಪ್ರಕಟವಾದ ಯಾವುದೇ ತರಹದ ಉತ್ತಮ ದಲಿತ ಸಾಹಿತ್ಯ ಕೃತಿಯನ್ನು ಸ್ಪರ್ಧೆಗೆ ಕಳುಹಿಸಬಹುದಾಗಿದೆ. ೫ ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು, ಪ್ರತಿ ಪ್ರವೇಶಕ್ಕೆ ಮೂರು ಪುಸ್ತಕಗಳನ್ನು ಕಳುಹಿಸಬೇಕು, ಸ್ಪರ್ಧೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ, ಜೂ.೩೦ ರೊಳಗಾಗಿ ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು ಇವರಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ೦೮೦-೨೬೬೧೨೯೯೧/೨೬೬೨೩೫೮೪ ಈ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ .

Leave a Reply

Top