You are here
Home > Koppal News > ಭಾಗ್ಯನಗರದಲ್ಲಿ ದೇವಿಯ ಮೆರವಣಿಗೆ ಬಂತು, ದಾರಿಬಿಡಿ.

ಭಾಗ್ಯನಗರದಲ್ಲಿ ದೇವಿಯ ಮೆರವಣಿಗೆ ಬಂತು, ದಾರಿಬಿಡಿ.

ನವರಾತ್ರಿ ಇಂದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ದೇವಿಯ ಓಮ್ಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ ‘ವಿಜಯ ದಶಮಿ’, ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವದು ಕರ್ನಾಟಕದ ಆಚರಣೆಯ ಪದ್ಧತಿ.
9 ದಿನಗಳ ಕಾಲ ಆದಿ ಶಕ್ತಿಯನ್ನು ನವ ವಿಧದಲ್ಲಿ ಪೂಜಿಸಲಾಗುತ್ತದೆ.
 1 ಮೊದಲ ದಿನ ಅಂದರೆ ಪಾಡ್ಯದ ದಿನ ಯೋಗನಿದ್ರಾ ದುರ್ಗಾ ಪೂಜಾ.
 2 ಎರಡನೇ ದಿನ ಆಂದರೆ ಬಿದಿಗೆ ದಿನ ದೇವಜಾತ ದುರ್ಗಾಪೂಜಾ. 3 ಮೂರನೇ ದಿನ ತದಿಗೆ – ಮಹಿಷಾಸುರ ಮರ್ಧಿನಿ ದುರ್ಗಾಪೂಜಾ.
 4 ನಾಲ್ಕನೇ ದಿನ ಚತುರ್ದಶಿ – ಶೈಲ ಜಾತಾ ದುರ್ಗಾಪೂಜಾ.
 5 ಐದನೇ ದಿನ ಪಂಚಮಿ – ದೂಮೃಹಾ ದುರ್ಗಾಪೂಜಾ.
 6 ಆರನೇ ದಿನ ಶಷ್ಠಿ – ಚಂಡ-ಮುಂಡ ಹಾ ದುರ್ಗಾಪೂಜಾ.
 7 ಏಳನೇ ದಿನ ಸಪ್ತಮಿ – ರಕ್ತ ಬೀಜ ಹಾ ದುರ್ಗಾಪೂಜಾ.
 8 ಎಂಟನೇ ದಿನ ಅಷ್ಟಮಿ – ನಿಶುಂಭ ಹಾ ದುರ್ಗಾಪೂಜಾ.(ದುರ್ಗಾಷ್ಠಮಿ)
 9  ಒಂಭತ್ತನೇ ದಿನ ಮಹಾನವಮಿ -ಶುಂಭ ಹಾ ದುರ್ಗಾಪೂಜಾ.

Leave a Reply

Top