You are here
Home > Koppal News > ಸಾಮಾನ್ಯ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ

ಸಾಮಾನ್ಯ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ

  ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಮೇ.೦೧ ಹಾಗೂ ೦೨ ರಂದು ಎರಡು ದಿನಗಳ ಕಾಲ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಸುಗಮ ಹಾಗೂ ಶಾಮತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ೧೪೪ನೇ ಕಲಂನ ಅನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಮೇ.೦೧ ಹಾಗೂ ೦೨ ರಂದು ಎರಡು ದಿನಗಳ ಕಾಲ ಬೆಳಿಗ್ಗೆ ೯.೦೦ ಗಂಟೆಯಿಂದ ಸಾಯಂಕಾಲ ೫.೩೦ ಗಂಟೆಯವರೆಗೆ ೦೨ ಪರೀಕ್ಷಾ ಕೇಂದ್ರಗಳಾದ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು ಕೊಪ್ಪಳ ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜ್ ಕೊಪ್ಪಳ ಈ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ/ವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿಗೊಳಿಸಿದೆ. ನಿಷೇಧಾಜ್ಞೆ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಎಸ್.ಟಿ.ಡಿ, ಮೊಬೈಲ್, ಪೇಜರ್, ಝರಾಕ್ಸ್, ಟೈಪಿಂಗ್, ೫ ಕ್ಕಿಂತ ಹೆಚ್ಚಿಗೆ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇದಿಸಿದೆ. ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Top