ಜ.೧೯ ರಂದು ಕೊಪ್ಪಳ ಜಿಲ್ಲಾ ಬಂಡವಾಳ ಹೂಡಿಕೆದಾರರ ಸಮಾವೇಶ.

ಕೊಪ್ಪಳ, ಜ.೧೪
(ಕ ವಾ) ಕೊಪ್ಪಳ ಜಿಲ್ಲಾಡಳಿತ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ,
ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ, ಕರ್ನಾಟಕ ಖಾದಿ
ಗ್ರಾಮೋದ್ಯೋಗ ಮಂಡಳಿ ಇವರುಗಳ ವತಿಯಿಂದ ಹಾಗೂ ಛೇಂಬರ್ ಆಫ್ ಕಾಮರ್ಸ್, ಗಂಗಾವತಿ ಮತ್ತು
ಕಾರಟಗಿಯ ರೈಸ್ ಮಿಲ್ಲರ್‍ಸ್ ಅಸೋಶಿಯೇಷನ್, ರೈಸ್ ಟೆಕ್ನಾಲಜಿ ಪಾರ್ಕ್, ಕಾರಟಗಿ,
ಗ್ರಾನೈಟ್ ಮಾಲೀಕರ ಸಂಘ, ಕುಷ್ಟಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಜಿಲ್ಲಾ
ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಜ.೧೯ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಡಳಿತ
ಭವನದ ಅಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದೆ.
     ಕೊಪ್ಪಳ ಜಿಲ್ಲಾ
ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಕಾರ್ಯಕ್ರಮ
ಉದ್ಘಾಟಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ,
ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಬಸವರಾಜ
ಪಾಟೀಲ್ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರು, ನಗರಾಭಿವೃದ್ಧಿ ಪ್ರಾಧಿಕಾರದ
ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ
ಮೇಲಿನಮನಿ, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ಬಾನು
ಚಂದುಸಾಬ್, ಜಿಲ್ಲಾ ಪಂಚಾಯಿತಿಯ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ
ಪರಸಪ್ಪ ಕತ್ತಿ, ಸರ್ಕಾರದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ್,
ಜಿಲ್ಲಾಧಿಕಾರಿ ಎಂ.ಕನಗವಲ್ಲಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಆರ್.ರಾಮಚಂದ್ರನ್, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಬೆಂಗಳೂರಿನ ಮುಖ್ಯ
ಕಾರ್ಯನಿರ್ವಾಹಕ ಅಧಿಕಾರಿ ರಘುರಾಮ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ
ಪಿ.ನಾಗೇಶ  ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದೆ.
Please follow and like us:

Leave a Reply