ಕೊಪ್ಪಳದಲ್ಲಿ ಸಾಮಾಜಿಕ ಸುರಕ್ಷತಾ ಯೋಜನೆಗಳ ಮಾಹಿತಿ ಕಾರ್ಯಗಾರ.

ಕೊಪ್ಪಳ ಜು. 14 ಕೊಪ್ಪಳ ಜಿಲ್ಲಾ ಬ್ಯಾಂಕರ್‌ಗಳ ಸಮೂಹ ಹಾಗೂ ಭಾರತೀಯ ಜೀವ ವಿಮಾ ನಿಗಮದ ಸಂಯುಕ್ತ ಆಶ್ರಯದಲ್ಲಿ ಪ್ರಧಾನ ಮಂತ್ರಿ ಸಾಮಾಜಿಕ ಸುರಕ್ಷತಾ ಯೋಜನೆಗಳ ಕುರಿತ ಮಾಹಿತಿ ಕಾರ್ಯಗಾರ ಜು. ೧೪ ಮಧ್ಯಾಹ್ನ ೪ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
     ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.  ಪ್ರಧಾನಮಂತ್ರಿಗಳು ಜಾರಿಗೆ ತಂದಿರುವ ಸಾಮಾಜಿಕ ಸುರಕ್ಷತಾ ಯೋಜನೆಗಳ ಕುರಿತು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು.  ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್, ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮತ್ತು ಭಾರತೀಯ ಜೀವ ವಿಮಾ ನಿಗಮದವರು ಜಾಗೃತಿ ಕಾರ್ಯಕ್ರಮ ಹಾಗೂ ನೋಂದಾಯಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಲೀಡ್ ಬ್ಯಾಂಕ್ ಮ್ಯಾನೇಜರ್ ರವೀಂದ್ರ ಅವರು  ತಿಳಿಸಿದ್ದಾರೆ.

Related posts

Leave a Comment