ಮಹಿಳೆಯರ ಉತ್ಪನ್ನಗಳಿಗೆ ಸರ್ಕಾರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು-ಮೈಲಪ್ಪ ಬಿಸರಳ್ಳಿ.

ಕೊಪ್ಪಳ ಮಾ-೧೩. ಮಹಿಳೆಯರಿಗೆ ಅವರದೇಯಾದ ಹಕ್ಕುಗಳಿವೆ. ಅವುಗಳನ್ನು ತಿಳಿದುಕೊಂಡು ಪ್ರತಿಯೊಂದು ಇಲಾಖೆಯಿಂದ ತಮ್ಮ ಪಾಲಿನ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಮಹಿಳೆಯರು ಸ್ವ-ಉದ್ಯೋಗದಲ್ಲಿ ತೊಡಗಿ ಹಲವು ಉತ್ಪನ್ನಗಳನ್ನು ತಯಾರಿಸಿ ಮಾರಲು ಸರ್ಕಾರದಿಂದ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿಕೊಡಬೇಕು, ಆಗ ಮಾತ್ರ ಮಹಿಳೆಯರು ಆರ್ಥಿಕವಾಗಿ ಮುಂದುವರೆಯಲು ಸಾಧ್ಯ ಎಂದು ದಲಿತ ವಿಮೋಚನೆಯ ಮಾನವ ಹಕ್ಕುಗಳ ವೇದಿಕೆಯ ಜಿಲ್ಲಾ ಸಂಘಟನಾ ಸಂಚಾಲಕ ಮೈಲಪ್ಪ ಬಿಸರಳ್ಳಿ ಹೇಳಿದರು.
Please follow and like us:
error