You are here
Home > Koppal News > ಸೆ.೦೭ ರಂದು ತಾಲೂಕ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಸೆ.೦೭ ರಂದು ತಾಲೂಕ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ದೈಹಿಕ ಶಿಕ್ಷಕರ ಸಂಘ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.೦೭ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ಕೊಪ್ಪಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ಕಾರ್ಯಕ್ರಮ ಜರುಗಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ನೆರವೇರಿಸಲಿದ್ದಾರೆ. ಕ್ರೀಡಾಧ್ವಜಾರೋಹಣವನ್ನು ಜಿ.ಪಂ.ಅಧ್ಯಕ್ಷ ಟಿ.ಜನಾರ್ಧನ ಹುಲಗಿ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾ.ಪಂ.ಅಧ್ಯಕ್ಷ ದೇವಪ್ಪ ಭರಮಪ್ಪ ಮೇಕಾಳಿ ಅವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ  ತಾ.ಪಂ.ಉಪಾಧ್ಯಕ್ಷೆ ಸುಜಾತಾ ಎಮ್.ಪಾಟೀಲ್, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣನವರ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೈ.ಸುದರ್ಶನರಾವ್, ಜಿಲ್ಲಾ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭುಸ್ವಾಮಿ ಹಿರೇಮಠ, ಜಿಲ್ಲಾ ಪ್ರಾಥಮಿಕ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಮುರ್ತುಸಾಬ, ತಾಲೂಕ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರಯ್ಯ ಮುಧೋಳ ಸೇರಿದಂತೆ ಜಿ.ಪಂ.ಸದಸ್ಯರು, ತಾ.ಪಂ.ಸದಸ್ಯರು, ನಗರಸಭೆ ಸದಸ್ಯರು ಆಗಮಿಸಲಿದ್ದಾರೆ ಎಂದು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾ ಅಧಿಕಾರಿ ಎನ್.ಎಸ್.ಪಾಟೀಲ್  ತಿಳಿಸಿದ್ದಾರೆ.

Leave a Reply

Top