ಜಿ.ಪಂ. ಅಧ್ಯಕ್ಷರಿಂದ ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನಗಳ ವಿತರಣೆ.

ಕೊಪ್ಪಳ ಅ. ೨೮ (ಕ ವಾ)ಕೊಪ್ಪಳ ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ ಅವರು ನಗರದ ಜಿಲ್ಲಾ ಪಂಚಾಯತಿ ಇಂಜಿನಿಯರಿಂಗ್ ವಿಭಾಗ ಕಚೇರಿ ಆವರಣದಲ್ಲಿ ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನಗಳ ವಿತರಣೆ ಮಾಡಿದರು.
     ಜಿಲ್ಲಾ ಪಂಚಾಯತಿ ಅಧ್ಯಕ್ಷರ ೨೦೧೪-೧೫ ನೇ ಸಾಲಿನ ಅಭಿವೃದ್ಧಿ (ಅನಿರ್ಬಂಧಿತ) ಅನುದಾನದಡಿ ಜಿಲ್ಲೆಯ ೧೪ ಅಂಗವಿಕಲರಿಗೆ ಮಂಜೂರು ಮಾಡಲಾದ ತ್ರಿಚಕ್ರ ಮೋಟಾರು ವಾಹನಗಳನ್ನು ಸಂಬಂಧಪಟ್ಟ ಫಲಾನುಭವಿಗಳಿಗೆ ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ ಅವರು ಬುಧವಾರದಂದು ನಗರದ ಜಿಲ್ಲಾ ಪಂಚಾಯತಿ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕರ ಅಭಿಯಂತರರ ಕಚೇರಿ ಆವರಣದಲ್ಲಿ ವಿತರಿಸಿದರು.  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಕಾರಿ ಕೃಷ್ಣ ಉದಪುಡಿ, ಜಿ.ಪಂ. ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕರ ಅಭಿಯಂತರ ಮನೋಹರ ವಡ್ಡರ್ ಸೇರಿದಂತೆ ವಿವಿಧ ಅಧಿಕಾರಿಗಳು, ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error