ವಿಜ್ಞಾನ ವಸತಿ ಕಾಲೇಜು ಕಟ್ಟಡದ ಅಡಿಗಲ್ಲು ಸಮಾರಂಭ

ಜ.೦೮ ರಂದು 
ಕೊಪ್ಪಳ ಜ.೦೭  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜ.೦೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಹಿರೇಸಿಂದೋಗಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ನಿರ್ವಹಣೆಯಾಗುತ್ತಿರುವ ಕೊಪ್ಪಳ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜಿನ ನೂತನ ಕಟ್ಟಡ ಸಂಕೀರ್ಣದ ಅಡಿಗಲ್ಲು ಸಮಾರಂಭ ಜರುಗಲಿದೆ.
ರಾಜ್ಯ ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಅವರು ಅಡಿಗಲ್ಲು ಸಮಾರಂಭಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ನಿರಾಣಿ, ಜಿ.ಪಂ.ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಸಂಸದ ಶಿವರಾಮಗೌಡ, ಶಾಸಕರಾದ ಪರಣ್ಣ ಮುನವಳ್ಳಿ, ಅಮರೇಗೌಡ ಪಾಟೀಲ್ ಬಯ್ಯಾಪುರ, ಶಿವರಾಜ ತಂಗಡಗಿ, ಈಶಣ್ಣ ಗುಳಗಣ್ಣವರ, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಶಶೀಲ್ ಜಿ.ನಮೋಶಿ, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ಜಿ.ಪಂ.ಸದಸ್ಯೆ ಭಾಗೀರಥಿ ಶಂಕರಗೌಡ ಪಾಟೀಲ್, ತಾ.ಪಂ.ಅದ್ಯಕ್ಷ ದೇವಣ್ಣ ಭರಮಪ್ಪ ಮೇಕಾಳಿ, ತಾ.ಪಂ.ಉಪಾಧ್ಯಕ್ಷೆ ಸುಜಾತ ಮಹೇಂದ್ರಗೌಡ ಮಾಲಿ ಪಾಟೀಲ್, ತಾ.ಪಂ.ಸದಸ್ಯೆ ಹುಲಿಗೆಮ್ಮ ಹೊನ್ನಪ್ಪ ಗದ್ದಿ, ಹಿರೇಸಿಂಧೋಗಿ ಗ್ರಾ.ಪಂ.ಅಧ್ಯಕ್ಷ ಕೇಶವರಡ್ಡಿ ಮಾದಿನೂರ, ಗ್ರಾ.ಪಂ.ಉಪಾಧ್ಯಕ್ಷೆ ಲಕ್ಷ್ಮವ್ವ ನಿಂಗಜ್ಜ ಹಳ್ಳಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಪ್ರಕಾಶ, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ ಅವರು ಭಾಗವಹಿಸುವರು ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಎಸ್.ಹೆಚ್. ಅಂಗಡಿ   ತಿಳಿಸಿದ್ದಾರೆ.
Please follow and like us:
error