ಕೊಪ್ಪಳಕ್ಕೆ ಕೋಡಿಮಠದ ಶ್ರೀಗಳ ಭೇಟಿ

 ೨೧: ಸಯ್ಯದ್ ಫೌಂಡೇಶನ್ ವತಿಯಿಂದ ಏರ್ಪಡಿಸಿದ ವಿಕಲಚೇತನರಿಗೆ ಬೈಸಿಕಲ್ ವಿತರಣೆ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯ ಹಾರ್‍ನಳ್ಳಿ ಕೋಡಿಮಠದ ಪರಮ ಪೂಜ್ಯ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಇಂದು ಸೆ.೨೧ ರಂದು ಮಧ್ಯಾಹ್ನ ೩.೩೦ಕ್ಕೆ ಸಯ್ಯದ್ ಫೌಂಡೇಶನ್ ಅಧ್ಯಕ್ಷ ಹಾಗೂ ಬಿ.ಎಸ್.ಆರ್ ಪಕ್ಷದ ಮುಖಂಡ ಕೆ.ಎಂ.ಸಯ್ಯದ್ ರವರ ನಿವಾಸಕ್ಕೆ ಭೇಟಿ ನೀಡುವರು. ಕಾರ್ಯಕ್ರಮದ ಸಾನಿಧ್ಯವನ್ನು ಗವಿಮಠದ ಶ್ರೀ ಮ.ನಿ.ಪ್ರ. ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು, ಟಣಕನಕಲ್ಲ ಕಾಲಜ್ಞಾನಿ ಬ್ರಹ್ಮ ಸದ್ಗುರು ಶ್ರೀ ಶರಣಬಸವ ಮಹಾಸ್ವಾಮಿಗಳು ವಹಿಸುವರು.ಉದ್ಘಾಟನೆಯನ್ನು ಹಿರಿಯ ಸಾಹಿತಿ ಡಾ.ಮಹಾಂತೇಶ ಮಲ್ಲನಗೌಡರ ನೇರೆವೇರಿಸುವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಯ್ಯದ್ ಫೌಂಡೇಶನ್ ಅಧ್ಯಕ್ಷ ಹಾಗೂ ಬಿ.ಎಸ್.ಆರ್ ಪಕ್ಷದ ಮುಖಂಡ ಕೆ.ಎಂ.ಸಯ್ಯದ್ ವಹಿಸುವರು, ಮುಖ್ಯಅತಿಥಿಗಳಾಗಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಪ್ರಭಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಮಹಾಂತೇಶ, ಹೊಸಳ್ಳಿ ಐ.ಆರ್.ಬಿ. ಡೆಪ್ಯೂಟಿ ಕಮಾಂಡೆಂಟ್ ಎಸ್.ಪಿ.  ಸುದರ್ಶನ್, ಡಿ.ವಾಯ್.ಎಸ್.ಪಿ. ಸುರೇಶ ಮಸೂತಿ, ತಹಶೀಲ್ದಾರ ಬಿ.ಎಲ್. ಘೋಟೆ ಪಾಲ್ಗೊಳ್ಳುವರು ನಂತರ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಸಲ್ಲಿಸಿದವರಿಗೆ ಸನ್ಮಾನಿಸಲಾಗುವುದು ಸರ್ವರೂಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೋಳಿಸಬೇಕೆಂದು ಎಂದು ಸಯ್ಯದ್ ಫೌಂಡೇಶನ್ ಕಾರ್ಯದರ್ಶಿ ಮಹ್ಮದ್ ವಸೀಮ್ ಹುಲಗೇರಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ 

Leave a Reply