ರಾಜ್ಯ ಮಟ್ಟದ ಉತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿ.

ಕೊಪ್ಪಳ-೦೪- ಎನ್.ಎಸ್.ಎಸ್ ಅಧಿಕಾರಿಗಳಾದ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಡಾ.ಸಿದ್ದಲಿಂಗಪ್ಪ ಕೊಟ್ನೆಕಲ್ ಮತ್ತು ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಶ್ರೀಮತಿ ಲಲಿತಾ ಅಂಗಡಿ ಇವರಿಗೆ ಕರ್ನಾಟಕ ಸರಕಾರದ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನೀಡುವ    ರಾಜ್ಯ ಮಟ್ಟದ ಉತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸದರಿ ಪ್ರಶಸ್ತಿಯನ್ನು ದಿ೦೬-೦೨-೨೦೧೬ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುವುದು. ಡಾ. ಸಿದ್ದಲಿಂಗಪ್ಪ ಕೊಟ್ನೆಕಲ್‌ರವರು ಕಳೆದ ೦೮ ವರ್ಷಗಳಿಂದ ಎನ್.ಎಸ್.ಎಸ್ ಅಧಿಕಾರಿಯಾಗಿ ಏಡ್ಸ್ ಜಾಗೃತಿ ಕಾರ್ಯಕ್ರಮ, ಐತಿಹಾಸಿಕ ಸಂರಕ್ಷಣಾ ಕಾರ್ಯಕ್ರಮ, ಆರೋಗ್ಯ ತಪಾಸಣಾ, ವಿಶೇಷ ಶಿಬಿರಗಳು ಮತ್ತು ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಶ್ರೀಮತಿ ಲಲಿತಾ ಅಂಗಡಿಯವರು ಕಳೆದ ೦೫ ವರ್ಷಗಳಿಂದ ಎನ್.ಎಸ್.ಎಸ್ ಅಧಿಕಾರಿಯಾಗಿ ತಮ್ಮ ಎನ್.ಎಸ್.ಎಸ್ ಘಟಕದಿಂದ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಪ್ರಶಸ್ತಿ ಪಡೆದ ಇವರನ್ನು ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಆಶೀರ್ವದಿಸಿದ್ದಾರೆ. ಮತ್ತು ಪ್ರಾಚಾರ್ಯರು, ಸಕಲ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
Please follow and like us:
error