ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ

 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಹಾಗೂ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಬಗ್ಗೆ ಜಾಗೃತಿಯನ್ನು ಮೂಡಿಸುವ ಕುರಿತಾಗಿ ಬೀದಿ ನಾಟಕ ಕಾರ್ಯಕ್ರಮ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಬಸ್ ನಿಲ್ದಾಣ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಲಾಯಿತು.
   ಬೀದಿ ನಾಟಕ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಶೇಖರಗೌಡ ರವರು ಜಿಲ್ಲೆಯಲ್ಲಿ ಮಕ್ಕಳ ಮೇಲೆನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು ಜನರಲ್ಲಿ ಕಾಯ್ದೆಗಳ ಬಗ್ಗೆ ಜಾಗೃತಿಯಿಲ್ಲದಿರುವುದು ಪ್ರಮುಖ ಕಾರಣವಾಗಿದೆ.    ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆಗಾಗಿ ಮಕ್ಕಳ ಸಹಾಯವಾಣಿಯನ್ನು ಜಿಲ್ಲೆಯಲ್ಲಿ ಆರಂಭಿಸಿದ್ದು ಇದು ಉಚಿತ ಕರೆಯಾಗಿರುತ್ತದೆ. ಸಂಕಷ್ಟಕ್ಕೆ ಸಿಲುಕಿದ ಮಕ್ಕಳು ಅಥವಾ ದೌರ್ಜನ್ಯಕ್ಕೊಳಗಾದ ಮಕ್ಕಳು ಕಂಡಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ ೧೦೯೮ ಕ್ಕೆ ಕರೆ ಮಾಡಿ ಮಾಹಿತಿಯನ್ನು ನೀಡಿದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ಅತಂಹ ಮಗುವಿಗೆ ಅಗತ್ಯ ಪುರ್ನವಸತಿಯನ್ನು ಕಲ್ಪಸಲಾಗುತ್ತದೆಂದು ವಿವರಿಸಿದರು.  
   ನಂತರ ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಸಂರಕ್ಷಣಾ ಕಾಯ್ದೆಯ ಬಗ್ಗೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಬಗ್ಗೆ ರಂಗಚೇತನಾ ಸಾಂಸ್ಕೃತಿಕ ಕಲಾ ತಂಡದಿಂದ ಬೀದಿ ನಾಟಕವನ್ನು ಪ್ರಸ್ತುತಪಡಿಸಲಾಯಿತು. 

Leave a Reply