ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೊಪ್ಪಳ ಶಾಸಕರ ಮನೆಯಲ್ಲಿ ಚಾಲನೆ

 : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಏ. ೧೧ ರಿಂದ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ರಮಕ್ಕೆ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ತಮ್ಮ ಕುಟುಂಬದ ಮಾಹಿತಿಯನ್ನು ಗಣತಿದಾರರಿಗೆ ನೀಡುವ ಮೂಲಕ ಚಾಲನೆ ನೀಡಿದರು.
  ಸಾಮಾಜಿಕ ಸಮಾನತೆಯ ಅನುಷ್ಠಾನಕ್ಕಾಗಿ ೮೪ ವರ್ಷಗಳ ನಂತರ ಇದೇ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ರಮಕ್ಕೆ ಕೊಪ್ಪಳದ ಶಾಸಕರ ಮನೆಯಲ್ಲಿ ಚಾಲನೆ ನೀಡಲಾಯಿತು.  ಗಣತಿದಾರರು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರ ಕುಟುಂಬದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿಗಳ ಬಗ್ಗೆ ಪ್ರಶ್ನಾವಳಿಗಳ ಮೂಲಕ ಶಾಸಕರಿಂದ ಮಾಹಿತಿ ಸಂಗ್ರಹಿಸಲಾಯಿತು.  ನಗರಸಭೆ ಪೌರಯುಕ್ತ ರಮೇಶ್ ಪಟ್ಟೇದಾರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply