ಏ.೧೭ ರಂದು ಕೊಪ್ಪಳದಲ್ಲಿ ಗ್ರಾಹಕರ ಜಾಗೃತಿ ಕಾರ್ಯಾಗಾರ

 : ಕೊಪ್ಪಳ ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರುಗಳ ಸಹಯೋಗದೊಂದಿಗೆ ಗ್ರಾಹಕರ ಜಾಗೃತಿ ಕಾರ್ಯಾಗಾರ ಏ.೧೭ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದೆ. 
  ಜಿಲ್ಲಾಧಿಕಾರಿ ಆರ್.ಆರ್. ಜನ್ನು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಕೆ.ವಿ. ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಅಪರ ಜಿಲ್ಲಾಧಿಕಾರಿ ಡಾ||ಸುರೇಶ ಇಟ್ನಾಳ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಬಿ. ಪಾನಘಂಟಿ, ಜಿಲ್ಲಾ ಗ್ರಾಹಕರ ವೇದಿಕೆ ಸದಸ್ಯ ಆರ್. ಬಂಡಾಚಾರ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವಸಂತಪ್ರೇಮಾ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. 
  ಬಳಿಕ ನಡೆಯಲಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಹಕರ ವೇದಿಕೆ ಅಧ್ಯಕ್ಷ ಕೃಷ್ಣಮೂರ್ತಿ ಅವರು ಗ್ರಾಹಕರ ಜಾಗೃತಿ ಆಂದೋಲನದಲ್ಲಿ ಗ್ರಾಹಕರ ಹಿತ ರಕ್ಷಣಾ ಕಾಯ್ದೆ-೧೯೮೬ ಒಂದು ಮೈಲುಗಲ್ಲು  ವಿಷಯ ಕುರಿತು, ವಕೀಲ ವ್ಹಿ.ಎಂ.ಭೂಸನೂರಮಠ ಅವರು ಗ್ರಾಹಕರ ವೇದಿಕೆ, ರಾಜ್ಯ ಮತ್ತು ರಾಷ್ಟ್ರೀಯ ಆಯೋಗಗಳಿಂದ ಗ್ರಾಹಕರ ಪರವಾಗಿ ಬಂದಿರುವ ಮಹತ್ವದ ತೀರ್ಪುಗಳು ವಿಷಯದ ಕುರಿತು. ಅಳವಂಡಿಯ ಸಾವಿತ್ರಿ ಮುಜುಮದಾರ ಅವರು ಗ್ರಾಹಕರ ಜಾಗೃತಿ ಚಳುವಳಿಯಲ್ಲಿ ಮಹಿಳೆಯರ ಪಾತ್ರ ವಿಷಯದ ಕುರಿತು. ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿ ಉಮೇಶ ಅವರು ಆಹಾರ ಕಲಬೆರಕೆ ತಡೆಗಟ್ಟುವ ವಿಧಾನಗಳು ಮತ್ತು ಕಲಬೆರಕೆಯಲ್ಲಿ ತೊಡಗಿದವರಿಗೆ ಕಾನೂನನ್ವಯ ವಿಧಿಸಬಹುದಾದ ಶಿಕ್ಷೆಗಳು ಎಂಬ ವಿಷಯಗಳ ಕುರಿತು ವಿಶೇಷ ಉಪನ್ಯಾಸ ನೀಡುವರು. 

Leave a Reply