fbpx

ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿಂದ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ

 ಲೋಕಸಭೆ ಚುನಾವಣೆಯ ನಿಮಿತ್ಯ ಏ. ೧೭ ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ, ಕಡ್ಡಾಯವಾಗಿ ಮತದಾನ ಮಾಡುತ್ತೇವೆಂದು ಅಧಿಕಾರಿ, ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು.
  ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ, ’ಪ್ರಜಾ ಪ್ರಭುತ್ವದಲ್ಲಿ ದೃಢವಿಶ್ವಾಸ ಹೊಂದಿ, ಮುಕ್ತ, ನ್ಯಾಯ ಸಮ್ಮತ ಚುನಾವಣೆಯ ಘನತೆಯನ್ನು ಎತ್ತಿ ಹಿಡಿಯುತ್ತೇವೆ, ನಿರ್ಭೀತರಾಗಿ, ಜಾತಿ,ಧರ್ಮ, ಮತ, ಇತ್ಯಾದಿಗಳಿಗೆ ಪ್ರಭಾವಿತರಾಗದೆ, ಯಾವುದೇ ಆಮಿಷಕ್ಕೊಳಗಾಗದೆ ಮತ ಚಲಾಯಿಸುತ್ತೇವೆ’ ಎಂಬುದಾಗಿ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ, ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.  ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್, ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಪಾಲ್ಗೊಂಡು, ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
Please follow and like us:
error

Leave a Reply

error: Content is protected !!