ಡಿ.೦೮ ರಂದು ಮುಖ್ಯಮಂತ್ರಿಗಳಿಂದ ಕುಕನೂರು ಬಸ್ ನಿಲ್ದಾಣ ಉದ್ಘಾಟನೆ

ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುಕನೂರು ನೂತನ ಬಸ್ ಘಟಕದ ಉದ್ಘಾಟನೆ ಡಿಸೆಂಬರ್ ೦೮ ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಮಿನುಲ್ಲಾ ಸಾಹೇಬ್ ಅವರು ತಿಳಿಸಿದ್ದಾರೆ.
ಕುಕನೂರು ನೂತನ ಬಸ್ ಘಟಕದ ಉದ್ಘಾಟನೆಯನ್ನು ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಗೃಹ ಮತ್ತು ಸಾರಿಗೆ ಸಚಿವರಾದ ಆರ್. ಅಶೋಕ ಅವರು ನೆರವೇರಿಸುವರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ನಿರಾಣಿ ಅವರು ಆಗಮಿಸಲಿದ್ದು ಯಲಬುರ್ಗಾ ಶಾಸಕ ಈಶಣ್ಣ ಗುಳಗಣ್ಣವರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.  ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸಾರಿಗೆ ಸಂಸ್ಥೆಯ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಮಿನುಲ್ಲಾ ಸಾಹೇಬ್  ತಿಳಿಸಿದ್ದಾರೆ.

Leave a Reply