ಬಾಬು ಜಗಜೀವನರಾಂ ಜಯಂತಿ : ಸಾಂಕೇತಿಕ ಆಚರಣೆ

 ಡಾ. ಬಾಬು ಜಗಜೀವನರಾಂ ಅವರ ೧೦೬ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾ ಆಡಳಿತದ ಆಡಿಟೋರಿಯಂ ಹಾಲ್‌ನಲ್ಲಿ ಸರಳ, ಸಾಂಕೇತಿಕವಾಗಿ ಆಚರಿಸಲಾಯಿತು.
     ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪ ನಮನ ಸಲ್ಲಿಸಿದರು.  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ, ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಸಹಾಯಕ ಆಯುಕ್ತ ಮಂಜುನಾಥ್, ಜಿಲ್ಲಾ ಸಮಾಜಕಲ್ಯಾಣಾಧಿಕಾರಿ ಮಂಜೂರ್ ಹುಸೇನ್, ನಗರಸಭೆ ಪೌರಾಯುಕ್ತೆ ಅಶ್ವಿನಿ ಬಿ.ಎಂ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿ, ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Leave a Reply