ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ನಿಷೇಧ


ಕೊಪ್ಪಳ ಸೆ. : ಕೊಪ್ಪಳ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ಕಾರ್ಯ ಸೆ. ೨೯ ರಂದು ಬೆಳಿಗ್ಗೆ ೮ ಗಂಟೆಯಿಂದ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾ ವಿದ್ಯಾಲಯದಲ್ಲಿ ನಡೆಯಲಿದ್ದು, ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಇನ್ನಿತರೆ ವಸ್ತುಗಳೊಂದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
  ಚುನಾವಣಾ ಮತ ಎಣಿಕೆ ಕಾಲದಲ್ಲಿ ಹಾಜರಾಗುವಂತಹ ಮತ ಎಣಿಕೆ ಅಧಿಕಾರಿ/ ಸಿಬ್ಬಂದಿಗಳು, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರುಗಳು, ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವಂತಹ ಸರ್ಕಾರಿ ಸಿಬ್ಬಂದಿ ಮತ್ತು ಅಧಿಕಾರಿಗಳು  ಮೊಬೈಲ್ ಫೋನ್ ಇತ್ಯಾದಿ ವಸ್ತುಗಳನ್ನು ಮತ ಎಣಿಕೆ ಕೇಂದ್ರದ ಒಳಗೆ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಚುನಾವಣಾಧಿಕಾರಿಯಾಗಿರುವ ಸಹಾಯಕ ಆಯುಕ್ತ ಎಂ. ಶರಣಬಸಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply