ಹೆಚ್‌ಎಎಲ್ ನಲ್ಲಿ ಅಪ್ರೆಂಟಿಸ್ ಹುದ್ದೆ : ಅರ್ಜಿ ಆಹ್ವಾನ

ಕೊಪ್ಪಳ ಡಿ.  ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಅಪ್ರೆಂಟಿಸ್ ಹುದ್ದೆ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
  ಬೆಂಗಳೂರಿನ ಹೆಚ್‌ಎಎಲ್ ನಲ್ಲಿ ಫಿಟ್ಟರ್, ಟರ್ನರ್, ಮಷಿನಿಸ್ಟ್, ಇಲೆಕ್ಟ್ರಿಷಿಯನ್, ವೆಲ್ಡರ್, ಪಾಸಾ, ಶೀಟ್ ಮೆಟಲ್ ವರ್ಕರ್, ಪೌಂಡ್ರಿಮನ್, ಕಾರ್ಪೆಂಟರ್, ವೃತ್ತಿ ತರಬೇತಿ ಹೊಂದಿದ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  ಅಭ್ಯರ್ಥಿಗಳ ಆಯ್ಕೆಯನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ಅಂಕಗಳ ಶೇ. ೭೦ ಹಾಗೂ ಐಟಿಐ ಅಂಕಗಳ ಶೇ. ೩೦ ರಷ್ಟನ್ನು ಗಣನೆಗೆ ತೆಗೆದುಕೊಂಡು ಮೆರಿಟ್ ಆಧಾರದ ಮೇಲೆ ಮಾಡಲಾಗುವುದು.  ಅರ್ಜಿಗಳನ್ನು ಉದ್ಯೋಗ ವಿನಿಮಯ ಕೇಂದ್ರದಿಂದಲೇ ಕಡ್ಡಾಯವಾಗಿ ಕಳುಹಿಸಬೇಕು.  ನೇರವಾಗಿ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.  ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ, ಕೊಪ್ಪಳ ದೂರವಾಣಿ ಸಂ: ೨೨೦೮೫೯ ಇವರನ್ನು ಜ. ೧೩ ರ ಒಳಗಾಗಿ ಸಂಪರ್ಕಿಸಬಹುದಾಗಿದೆ.
Please follow and like us:
error

Related posts

Leave a Comment