ಯತ್ನಟ್ಟಿ ಸೇತುವೆ ಕಾಮಗಾರಿಗೆ ಸಚಿವ ಶಿವರಾಜ್ ತಂಗಡಗಿಯವರಿಂದ ಚಾಲನೆ


 ಕೊಪ್ಪಳ ತಾಲೂಕಿನ ಯತ್ನಟ್ಟಿ ಗ್ರಾಮದಲ್ಲಿ ಹೊಸದಾಗಿ 7. 5 ಕೋಟಿ ರೂ. ವೆಚ್ಚದಲ್ಲಿ ಹಳ್ಳಕ್ಕೆ ಸೇತುವೆ ನಿರ್ಮಿಸುವ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
  ಲೋಕೋಪಯೋಗಿ ಇಲಾಖೆಗೆ ಕಾಮಗಾರಿಯ ಹೊಣೆ ವಹಿಸಲಾಗಿದ್ದು, ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.
  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ, ಜಿ.ಪಂ. ಸದಸ್ಯೆ ವನಿತಾಗಡಾದ್ ಸೇರಿದಂತೆ ವಿವಿಧ ಗಣ್ಯರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error