ನೈಜ ನಾಯಕತ್ವದಿಂದ ಅಭಿವೃದ್ಧಿ ಸಾಧ್ಯ-ಶಾಸಕ ಕೆ.ರಾಘವೇಂದ್ರ ಹಿಟ್ನಾಳ.

ಕೊಪ್ಪಳ-೦೨, ಕಾತರಕಿ-ಗುಡ್ಲಾನೂರು ಗ್ರಾಮದಲ್ಲಿ ಶಾಸಕರ ಅನುದಾನದಡಿಯಲ್ಲಿ ರೂ.೫ ಲಕ್ಷದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಹಾಗೂ ೩೦೦೦ ಸಾವಿರ ಲೀಟರ್ ಸಾಮರ್ಥ್ಯದ ಬಲ್ಕ್ ಮಿಲ್ಕ್ ಕೂಲರ್ ಉದ್ಘಾಟಿಸಿ ಮಾತನಾಡಿದ ಕೊಪ್ಪಳದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳರವರು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ದೂರದೃಷ್ಟಿ ಹೊಂದಿ ಜನಪರ ಕಾರ್ಯಗಳನ್ನು ಕೈಗೆತ್ತಿಕೊಂಡು ಹಂತ-ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದಿರುತ್ತೇನೆ. ಈ ಆರ್ಥಿಕ ಬಜೆಟ್‌ನಲ್ಲಿ ರಾಜ್ಯದ ಜನಪ್ರೀಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ರೂ. ೧೫೦ ಕೋಟಿ ಮಂಜೂರು ಮಾಡಿದ್ದು ಕೊಪ್ಪಳ ಕ್ಷೇತ್ರಕ್ಕೆ ಈ ಆರ್ಥಿಕ ವರ್ಷದಲ್ಲೇ ೮೪ ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿ ಪ್ರಾರಂಭಮಾಡಲಾಗುವುದು. ಡಂಬರಳ್ಳಿ,ಬೋಚನಹಳ್ಳಿ ಗ್ರಾಮಗಳಿಗೆ ಬ್ರಿಜ್ ಕಮ್ ಬ್ಯಾರೇಜ್ ರೂ.೧೪ ಕೋಟಿ ವೆಚ್ಚದಲ್ಲಿ ಶೀಘ್ರವೇ ಭೂಮಿಪೂಜೆ ನೇರವೇರಿಸಲಾಗುವುದು.ಈಗಾಗಲೇ ಶೇಕಡ ೬೦ ಗ್ರಾಮಗಳಲ್ಲಿ ಎಸ್.ಪಿ.ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಗುಣಮಟ್ಟದ ಸಿಸಿ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಇದೇ ಆರ್ಥಿಕ ವರ್ಷದಲ್ಲಿ ಕ್ಷೇತ್ರದ ಎಲ್ಲಾ ಗ್ರಾಮಗಳ ರಸ್ತೆ, ಶುದ್ಧ ಕುಡಿಯುವ ನೀರು, ಹಾಗೂ ನೀರಾವರಿ ಕಾಮಗಾರಿಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದು ಹೇಳಿದರು.
Please follow and like us:
error