ಕಾರ್ಮಿಕ ಒಗ್ಗಟ್ಟಿನ ಹೋರಾಟಕ್ಕೆ ಕರೆ


ಕೊಪ್ಪಳ : ನಾನಾ ಸಂಘಟನೆಗಳಲ್ಲಿ ಹಂಚಿ ಹೋಗಿರುವ ಕಾರ್ಮಿಕರಲ್ಲಿ ಒಗ್ಗಟ್ಟಿನ ಕೊರತೆ ಇದೆ. ಇದರಿಂದಾಗಿ ಹೋರಾಟಕ್ಕೆ ದೊಡ್ಡ ಮಟ್ಟದ ಬಲ ಸಿಗುತ್ತಿಲ್ಲ. ಬಂಡವಾಳ ಶಾಹಿಗಳು ಇದನ್ನೇ ಮೂಲ ಮಾಡಿಕೊಂಡು ಕಾರ್ಮಿಕರನ್ನು ಶೋಷಿಸುತ್ತಿದ್ದಾರೆ. ಆದ್ದರಿಂದ ಎಲ್ಲ ಕಾರ್ಮಿಕರು ಒಗ್ಗಟ್ಟಾಗಿ ಹೋರಾಡಿದರೆ ಮಾತ್ರ ತಮ್ಮ ಹಕ್ಕುಗಳನ್ನು ರಕ್ಷಿಸಲು ಸಾಧ್ಯ ಎಂದು ಟಿಯುಸಿಐನ ರಾಜ್ಯಾಧ್ಯಕ್ಷ ಡಿ.ಎಚ್.ಪೂಜಾರ ಹೇಳಿದರು.
ಸಾಹಿತ್ಯ ಭವನದ ಪಕ್ಕದ ಜಾಗೆಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಇದಕ್ಕೂ ಮೊದಲು ಟಿಯುಸಿಐ ನ ಕಾರ್ಯಕರ್ತರು ಮೆರವಣಿಗೆಯನ್ನು ಹಮ್ಮಿಕೊಂಡಿದ್ದರು. ಮೆರವಣಿಗೆಯು ಗಡಿಯಾರ ಕಂಬದ ಸರ್ಕಲ್ ನಿಂದ ಹಾದು ಸಾಹಿತ್ಯ ಭವನದವರೆಗೆ ನಡೆದಿತ್ತು. ಮೆರವಣಿಗೆಯಲ್ಲಿ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ನಂತರ ನಡೆದ ಸಭೆಯಲ್ಲಿ ಪ್ರೋ.ಅಲ್ಲಮಪ್ರಭು ಬೆಟ್ಟದೂರ, ಮದ್ದಾನಯ್ಯ ಹಿರೇಮಠ, ಎಂ.ಗಂಗಾಧರ ಸೇರಿದಂತೆ ಹಲವಾರು ಮುಖಂಡರು ಮಾತನಾಡಿದರು.

Leave a Reply