fbpx

ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಪುನರ್ ರಚನೆ

 ಕೊಪ್ಪಳ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿಯನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪುನರ್ ರಚಿಸಿ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ಆದೇಶ ಹೊರಡಿಸಿದ್ದಾರೆ. 
ಸಮಿತಿಗೆ ಸಂಸದ ಕರಡಿ ಸಂಗಣ್ಣ ಅವರು ಅಧ್ಯಕ್ಷರಾಗಿರುತ್ತಾರೆ. ಕೃಷ್ಣ ಡಿ.ಉದಪುಡಿ ಅವರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ, ಶಾಸಕರುಗಳಾದ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ರಾಜ್ಯ ಸರ್ಕಾರದಿಂದ ಪ್ರತಿನಿಧಿಸುವ ಒಬ್ಬ ಅಧಿಕಾರಿಗಳು, ಜಿ.ಪಂ. ಅಧ್ಯಕ್ಷ ಅಮರೇಶ ಕುಳಗಿ, ಕೊಪ್ಪಳ, ಗಂಗಾವತಿ, ಕುಷ್ಟಗಿ, ಯಲಬುರ್ಗಾ ತಾಲೂಕುಗಳ ತಾ.ಪಂ. ಅಧ್ಯಕ್ಷರು, ಜಿ.ಪಂ. ಡಿ.ಆರ್.ಡಿ.ಎ ಯೋಜನಾ ನಿರ್ದೇಶಕರು, ಯಲಬುರ್ಗಾದ ಶಿವನಗೌಡ ಬನ್ನಪ್ಪಗೌಡ್ರ, ಗಂಗಾವತಿ ತಾಲೂಕು ಶ್ರೀರಾಮನಗರದ ಸತ್ಯನಾರಾಯಣರಾವ್ ದೇಶಪಾಂಡೆ, ಕುಷ್ಟಗಿಯ ಮನೋಹರ ಗದ್ದಿಗೇರಿ, ಕೊಪ್ಪಳದ ಶೋಭಾ ನಗರಿ, ಗಂಗಾವತಿ ತಾಲೂಕು ಬಸಾಪಟ್ಟಣದ ವಿಜಯಕುಮಾರ ಡೊಂಬರೆ, ಲೀಡ್ ಬ್ಯಾಂಕ್‌ನ ವ್ಯವಸ್ಥಾಪಕರು, ಹಾಗೂ ಅಂಚೆ ಇಲಾಖೆಯ ಮುಖ್ಯ ಅಧೀಕ್ಷಕರು ಸದಸ್ಯರುಗಳಾಗಿರುತ್ತಾರೆ ಎಂದು ಜಿ.ಪಂ. ಕಚೇರಿ ತಿಳಿಸಿದೆ.
Please follow and like us:
error

Leave a Reply

error: Content is protected !!